ಶಿವಮೊಗ್ಗ ಗಲಭೆ ಸರ್ಕಾರದ ಓಲೈಕೆ ರಾಜಕಾರಣದ ಫಲ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಒಂದು ಸಮುದಾಯದ ಓಲೈಕೆ ರಾಜಕಾರಣ ಮಾಡುತ್ತಿರುವುದರಿಂದ ಶಿವಮೊಗ್ಗದ ಗಲಭೆಗೆ ಪ್ರೇರಣೆಯಾಗಿದ್ದು, ತಪ್ಪಿತಸ್ಥರು ಯಾರೆ ಇರಲಿ ಅವರನ್ನು ಹಿಡಿದು ಒಳೆಗೆ ಹಾಕುವ ಬದಲು ಸಚಿವರು ಅವರಿಗೆ ಕ್ಲೀನ್ ಚಿಟ್ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಈ ಕುರಿತು ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಗಲಭೆ ಮಾಡಿಸುತ್ತಿದ್ದಾರೆಂದು ಸಚಿವರೇ ದಾರಿ ತಪ್ಪಿಸುತ್ತಿದ್ದಾರೆ‌.‌ ಯಾರು ಕ್ರಮ ಕೈಗೊಳ್ಳಬೇಕೊ ಅವರೇ ಹೀಗೆ ಹೇಳಿದರೆ ಸರ್ಕಾರದ ಮೆಲೆ ಜನ ಭರವಸೆ ಇಡುವುದು ಹೇಗೆ ? ಗೃಹ ಸಚಿವರು ಇದು ಸಣ್ಣ ಘಟನೆ ಅಂತ ಹೇಳಿದ್ದಾರೆ . ಈ ಸರ್ಕಾರದ ತುಷ್ಟೀಕರಣದ ನೀತಿಯೇ ಸಮಾಜ ಘಾತುಕ ಶಕ್ತಿಗಳು ಹೆಚ್ಚಾಗಲು ಕಾರಣವಾಗಿದೆ. ಗಡಿ ಜಿಲ್ಲೆಗಳಲ್ಲಿ ಸಮಾಜ ಘಾತುಕ‌ಶಕ್ತಿಗಳು ಜಾಲ ವ್ಯಾಪಿಸಿಕೊಳ್ಳಲು ಕಾರಣವಾಗಿದೆ‌ ಎಂದರು.

ಇಷ್ಟೇ ಅಲ್ಲದೇ ಈ ಥರದ ಕೇಸ್ ಗಳಲ್ಲಿ ಆರೆಸ್ಟ್ ಆದವರನ್ನು ಬಿಡುಗಡೆ ಮಾಡುವಂತೆ ಸಚಿವರು, ಶಾಸಕರು ಒತ್ತಾಯ ಮಾಡುವುದನ್ನು ನೋಡಿದರೆ ಈ ಸರ್ಕಾರ ಏನು ಮಾಡಲು ಹೊರಟಿದೆ ಅಂತ ತಿಳಿಯುತ್ತಿಲ್ಲ. ಹಿಂದೆ ಪಿಎಫ್ಬೈ ನಲ್ಲಿ ಇದ್ದವರೆ ಹುಬ್ಬಳ್ಳಿ ಗಲಭೆಯಲ್ಲಿ ಇದ್ದರು. ಡಿಸಿಎಂ ಶಿವಕುಮಾರ್ ಅವರೇ ಹುಬ್ಬಳ್ಳಿ ಗಲಭೆಯಲ್ಲಿ ಪಾಲ್ಗೊಂಡವರ ಪ್ರಕರಣ ವಾಪಸ್ ಪಡೆಯಲು ಪತ್ರ ಬರೆದಿದ್ದಾರೆ ಎಂದರೆ ಏನರ್ಥ.

ಗೃಹ ಸಚಿವರು ಶಿವಮೊಗ್ಗ ಘಟನೆ ಸಣ್ಣ ಘಟನೆ ಅಂತ ಗೃಹ ಸಚಿವರು ಹೇಳಿದ್ದಾರೆ. ಈಗ ತಪ್ಪಿನ ಅರಿವಾಗಿ ತಾವು ಹೇಳಿಲ್ಲ ಅಂತ ತಿರುಗಿಸುತ್ತಿದ್ದಾರೆ.. ಉಡುಪಿಯಲ್ಲಿ ಹಿಂದೂ ಸಂಘಟನೆಗಳು ಕಾರ್ಯಕ್ರಮಕ್ಕೆ ಹಾಕಿರುವ ಬ್ಯಾನರ್ ಗಳನ್ನು ತೆರವುಗೊಳಿಸುವುದು ಓಲೈಕೆ ರಾಜಕಾರಧ ಸ್ಪಷ್ಟ ಉದಾಹರಣೆ ಎಂದು ಹೇಳಿದರು.

ಜಾತಿ ಸಮೀಕ್ಷೆ ಬರಲಿ ನೋಡೋಣ
ನಾವು ಜಾತಿ ಸಮೀಕ್ಷೆ ವಿರೋದ ಮಾಡಿಲ್ಲ. ರಾಜ್ಯ ಸರ್ಕಾರ ಸಾಮಾಜಿಕ ಆರ್ಥಿಕ ಸಮೀಕ್ಷೆ ಮಾಡಿಸಿದ್ದು,ಅದು ಜಾತಿ ಗಣತಿ ಅಲ್ಲ ಅಂತ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ‌.. ಉತ್ತರ ಭಾರತದ ಜಾತಿ ಸಮೀಕರಣಕ್ಕೂ ದಕ್ಷಿಣ ಭಾರತದ ಜಾತಿ ಸಮಿಕರಣಕ್ಕೂ ವ್ಯತ್ಯಾಸ ಇದೆ. ಈ ವರದಿಯಿಂದ ತುಕಲಿತಕ್ಕೊಳಗಾದವರಿಗೆ ನ್ಯಾಯ ಒದಗಿಸುವ ಜವಾಬ್ದಾರಿ ಸರ್ಕಾರಕ್ಕೆ ಇದೆ ಎಂದರು.

ಈ ವರದಿಯಲ್ಲಿ ಏನಿದೆ ಅಂತ ಗೊತ್ತಿಲ್ಲ. ಈಗಾಗಲೇ ವರದಿ ಸೋರಿಕೆ ಆಗಿದೆ ಅಂತ ಆರೋಪ ಇದೆ. ಹೀಗಾಗಿ ಈ ವರದಿಯಲ್ಲಿ ಏನಿದೆಯೊ ಗೊತ್ತಿಲ್ಲ‌‌. ವರದಿ ಬಂದ ಮೇಲೆ ನೋಡೊಣ. ಸಿದ್ದರಾಮಯ್ಯ ಅವರು ಹಿಂದೆ ಸಿಎಂ ಆಗಿದ್ದಾಗಲೇ ವರದಿ ಸ್ವೀಕಾರ ಮಾಡಬಹುದಿತ್ತು. ಆದರೆ ಆಗ ಚುನಾವಣೆ ಬಂತು ಅಂತ ಜಾರಿ ಮಾಡಿಲ್ಲ. ಈಗ ಏನು ಮಾಡುತ್ತಾರೊ ನೊಡೊಣ ಎಂದರು.

Gayathri SG

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

1 hour ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

3 hours ago