ಬೆಂಗಳೂರು: ಬಿಜೆಪಿ ಈಗಾಗಲೇ ಟಿಕೆಟ್ ಘೋಷಣೆ ಮಾಡಿದ್ದು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.
ಇಂದು ಶೋಭಾ ಕರಂದ್ಲಾಜೆ ಅವರು ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಿದರು. ಈ ಸಮಯದಲ್ಲಿ ಮಾಜಿ ಸಚಿವ ಅಶ್ವತ್ಥನಾರಾಯಣ ಸಹ ಜೊತೆಗಿದ್ದರು.
ಕಳೆದ ಬಾರಿ ಅವರು ಉಡುಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಇದೀಗ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಪ್ರಚಾರ ಕಾರ್ಯವನ್ನು ಶೋಭಾ ಕರಂದ್ಲಾಜೆ ಆರಂಭ ಮಾಡಿದ್ದಾರೆ.
ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರ ಮನೆಗೆ ಭೇಟಿ ನೀಡಿ, ಲೋಕಸಭಾ ಚುನಾವಣೆಗೆ ಬೆಂಬಲ ನೀಡುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ, ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಅವರು ಉಪಸ್ಥಿತರಿದ್ದರು.#Bjp #BjpKarnataka #BjpIndia #BengaluruNorth #ShobhaKarandlaje pic.twitter.com/bWiM8Gf40h
— Shobha Karandlaje (Modi Ka Parivar) (@ShobhaBJP) March 19, 2024