ಮದ್ಯಪ್ರಿಯರಿಗೆ ಶಾಕಿಂಗ್‌ ನ್ಯೂಸ್‌ ಮೂರು ದಿನ ಸಿಗೋದಿಲ್ಲ ಲಿಕ್ಕರ್‌

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ 3 ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮೇ 8ರ ಮಧ್ಯರಾತ್ರಿಯಿಂದ ಮೇ10 ರ ಮಧ್ಯರಾತ್ರಿಯವರೆಗೂ ಮದ್ಯ ಅಂಗಡಿಗಳನ್ನು ಬಂದ್ ಮಾಡಲಾಗುತ್ತೆ. 3 ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು ಮೇ 13ರಂದು ಫಲಿತಾಂಶ ಹೊರ ಬೀಳಲಿದೆ. ಈ ಹಿನ್ನೆಲೆಯಲ್ಲಿ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮದ್ಯ ಮಾರಾಟ ಹಾಗೂ ಸಾಗಾಟದ ಮೇಲೆ ನಿರ್ಬಂಧ ಹೇರಲಾಗಿದೆ. ಮೇ 13ರಂದು ಫಲಿತಾಂಶ ಇರೋ ಕಾರಣ ಮೇ 12ರ ಮಧ್ಯರಾತ್ರಿಯಿಂದ ಮೇ 13ರ ಮಧ್ಯರಾತ್ರಿಯವರೆಗೂ ಮದ್ಯ ಸಿಗುವುದಿಲ್ಲ.

ಮೇ‌ 8 ರಿಂದ 10 ರವರೆಗೂ ಫುಲ್ ಡ್ರೈ ಡೇ. ಮೇ‌ 10 ಎಲೆಕ್ಷನ್ ‌ಮುಗಿಯುವ ತನಕ ಮದ್ಯ ಸರಬರಾಜು ಬಂದ್ ಮಾಡಲಾಗುತ್ತದೆ. ನೆರೆಯ ರಾಜ್ಯಗಳಲ್ಲೂ‌ ಮದ್ಯ ಬಂದ್ ಆಗಲಿದೆ.

ಕೇರಳ, ಆಂಧ್ರ ಪ್ರದೇಶ, ಗೋವ, ತಮಿಳುನಾಡಿಗೂ ಈಗಾಗಲೇ ಡ್ರೈ ಡೇಗೆ ಅಬಕಾರಿ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಮದ್ಯ ಸಿಗದಂತೆ ಕಣ್ಣಿಡಲಾಗುತ್ತೆ. ಎಲೆಕ್ಷನ್ ಮುಗಿದ ಬೆನ್ನಲ್ಲೇ ಕೌಂಟಿಂಗ್ ಗೂ‌ ಡ್ರೈ ಡೇ ಸೂಚಿಸಲಾಗಿದೆ.

ಚುನಾವಣೆ ಹಿನ್ನಲೆ ಕಟ್ಟುನಿಟ್ಟಿನ ಕ್ರಮಕ್ಕೆ ಫ್ಲೈಯಿಂಗ್ ಸ್ಕ್ವಾಡ್ ನಿಯೋಜನೆ ಮಾಡಲಾಗಿದೆ. ಎಲ್ಲಾ ಬಾರ್ ರೆಸ್ಟೋರೆಂಟ್, ರಿಟೇಲ್ ಮಾರಾಟ ಮಳಿಗೆಗಳ ಮೇಲೆ ನಿಗಾ ಇಡಲಾಗಿದೆ. ಈಗಾಗಲೇ ಎಲ್ಲಾ ಬಾರ್ ಅಂಡ್ ರೆಸ್ಟೋರೆಂಟ್, ಪಬ್ ಗಳಿಗೆ ಮದ್ಯ ಮಾರಾಟವನ್ನು ಸ್ಥಗಿತಗೊಳಿಸುವ ಬಗ್ಗೆ ಸೂಚನೆ ನೀಡಲಾಗಿದೆ. ಫೈ ಸ್ಟಾರ್ ಹೋಟೆಲ್ ನಲ್ಲೂ‌ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಿಯಮ‌ ಉಲ್ಲಂಘಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ.

Sneha Gowda

Recent Posts

ಬಿಸಿಲಿನ ಶಾಖಕ್ಕೆ ರಾಯಚೂರಿನಲ್ಲಿ ಐವರು ಬಲಿ : ಹೊತ್ತಿ ಉರಿದ ಕಾರು

ಜಿಲ್ಲೆಯಲ್ಲಿ ಬಿಸಿಲು ಆವರಿಸಿಕೊಂಡಿದ್ದು, ಬಿಸಿಲಿನ ಸಾಖಕ್ಕೆ ಕಳೆದ 24 ಗಂಟೆಗಳ ಅವಧಿಯಲ್ಲಿ ಐವರು ಮೃತಪಟ್ಟಿದ್ದಾರೆ. ಹಾಗೂ ಶಕ್ತಿನಗರದಲ್ಲಿ ಕಾರಿಗೆ ಬೆಂಕಿ…

14 mins ago

ಇಂದು (ಮೇ 04) ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನ

ಜನ ಸಮುದಾಯವನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಪಣಕ್ಕಿಡುವ ಅಗ್ನಿ ಶಾಮಕದಳದ ವೀರರನ್ನು ಗೌರವಿಸಲು ಇಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನವನ್ನು…

15 mins ago

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಬೀದಿ‌ ಕಾಳಗ : ವಿಡಿಯೋ ವೈರಲ್

ಮಂಗಳೂರಿನ ಹೊರ ವಲಯ ವಳಚ್ಚಿಲ್‌ನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಜಗಳವಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜ್ ಫೆಸ್ಟ್…

34 mins ago

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಅಮಿತ್‌ ಶಾ ವಿರುದ್ಧ ಕೇಸ್‌ ದಾಖಲು

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ತೆಲಂಗಾಣದಲ್ಲಿ ಕೇಸ್‌ ದಾಖಲಾಗಿದೆ. ಮುಖ್ಯ ಚುನಾವಣಾಧಿಕಾರಿ…

35 mins ago

ಕೇಂದ್ರ ಸಚಿವ ಭಗವಂತ ಖೂಖಾ ಒಬ್ಬ ಸುಳ್ಳಿನ ಸರ್ದಾರ : ಖಂಡ್ರೆ ಆರೋಪ

ನಗರದಲ್ಲಿ ಸಚಿವ ಈಶ್ವರ ಖಂಡ್ರೆ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಭಗವಂತ ಖೂಖಾ ವಿರುದ್ದ ಬ್ಯಾಟಿಂಗ್ ಮಾಡಿದ್ದಾರೆ.

56 mins ago

ನಾಟಕ ಪ್ರದರ್ಶನದ ವೇಳೆಯೇ ಕುಸಿದು ಬಿದ್ದು ನಟ ಮೃತ್ಯು

ನಟನೊಬ್ಬ ನಟಿಸುತ್ತಾ ವೇದಿಕೆಯ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಯಲಹಂಕದ ಸಾತನೂರು ಗ್ರಾಮದಲ್ಲಿ ನಡೆದಿದೆ.

58 mins ago