News Karnataka Kannada
Monday, April 29 2024
ಬೆಂಗಳೂರು ನಗರ

ಎಸ್​ಎಸ್​ಎಲ್​ಸಿ, ಪಿಯುಸಿ ವರ್ಷಕ್ಕೆ ಮೂರು ಬಾರಿ ಪರೀಕ್ಷೆ

ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ವಿಚಾರ ಹಗುರವಾಗಿ ತೆಗೆದುಕೊಳ್ಳಲು ಬರೋದಿಲ್ಲ.‌ ಯಾರು ಇದನ್ನು ಮಾಡಿದ್ದಾರೆ ಪತ್ತೆ ಹಚ್ಚುತ್ತೇವೆ ಎಂದು ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
Photo Credit : News Kannada

ಬೆಂಗಳೂರು: ಎಸ್​ಎಸ್​ಎಲ್​ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2023-24ನೇ ಶೈಕ್ಷಣಿಕ ಸಾಲಿನಿಂದ SSLC, 2nd PUC ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಇದುವರೆಗೆ ವರ್ಷಕ್ಕೆ 2 ಪರೀಕ್ಷೆ ಮಾತ್ರ ನಡೆಸುತ್ತಿದ್ದ ಶಿಕ್ಷಣ ಇಲಾಖೆ ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ.

ಶೈಕ್ಷಣಿಕ ಪ್ರಗತಿ, ಅರ್ಥಪೂರ್ಣ ಕಲಿಕೆ, ಜ್ಞಾನಧಾರಣೆ ವೃದ್ಧಿಸುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದ್ದು, ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ನಡೆಸಲಿರುವ 3 ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ವಿಧಾನಸೌಧದಲ್ಲಿಇಂದು ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಘೋಷಣೆ ಮಾಡಿದರು. ಈ ನಿಯಮದ ಪ್ರಕಾರ ವಿದ್ಯಾರ್ಥಿಗಳು, ಕೆಲ ವಿಷಯಗಳಲ್ಲಿ ಫೇಲ್ ಆದರೂ ಮುಂದಿನ ತರಗತಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು