ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ ಎಸ್ಎಸ್ಎಲ್ಸಿ ಫಲಿತಾಂಶ ದಿನಾಂಕ ಮತ್ತು ಸಮಯವನ್ನು ಪ್ರಕಟಿಸಿದ್ದು, ನಾಳೆ ( ಮೇ 8ರಂದು) ಬೆಳಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರೆಸ್ ಮೀಟ್ ನಡೆಸಿ ಫಲಿತಾಂಶ ಪ್ರಕಟಿಸಲಿದೆ.
ಬೆಳಗ್ಗೆ 11 ಗಂಟೆಗೆ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. karresults.nic.in ಮತ್ತು kseab.karnataka.gov.in. ಫಲಿತಾಂಶವನ್ನು ಪರಿಶೀಲಿಸಲು ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ.