ಬೆಂಗಳೂರು: ಸ್ಟಾಫ್ ನರ್ಸ್ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು: ಖಿನ್ನತೆಯಿಂದ ಬಳಲುತ್ತಿದ್ದ ಸ್ಟಾಫ್ ನರ್ಸ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಸುಮಿತ್ರಾ (32 ವರ್ಷ) ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಸುಮಿತ್ರಾಗೆ ಇನ್ನು ಮದುವೆಯಾಗಿರಲಿಲ್ಲ. ಈ ವಿಚಾರವಾಗಿ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಕುಟುಂಬಸ್ಥರೊಂದಿಗೆ ವಾಸವಿದ್ದ ಸುಮಿತ್ರಾ ಮುಂಜಾನೆ ಕೆಲಸಕ್ಕೆ ತೆರಳಬೇಕಾದವರು ಎದ್ದಿರಲಿಲ್ಲ. ಕುಟುಂಬಸ್ಥರು‌ ಕೋಣೆಯ ಬಾಗಿಲು ತಟ್ಟಿದರೂ ಸಹ ಬಾಗಿಲು ತೆರೆಯಲಿಲ್ಲ. ಅನುಮಾನಗೊಂಡ ಕುಟುಂಬಸ್ಥರು ಬಾಗಿಲು ಮುರಿದು ನೋಡಿದಾಗ ಸುಮಿತ್ರಾ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಈ ಹಿನ್ನೆಲೆ ಗಿರಿನಗರ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ‌. ಈ ವೇಳೆ ಸ್ಥಳದಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ. ನನ್ನನ್ನು ಖುಷಿಯಾಗಿ ಕಳುಹಿಸಿಕೊಡಿ ಎಂದು ಬರೆಯಲಾಗಿದೆ. ಇನ್ನೂ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Gayathri SG

Recent Posts

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

49 seconds ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

11 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

16 mins ago

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

50 mins ago

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

1 hour ago

ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು !

ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

1 hour ago