News Karnataka Kannada
Tuesday, April 30 2024
ಬೆಂಗಳೂರು ನಗರ

ಬೆಂಗಳೂರು: 3 ಇಲಾಖೆ ಮತ್ತು ವಿವಿಧ ಮಂಡಳಿಗಳನ್ನು ವಿಲೀನಗೊಳಿಸಲು ನಿರ್ಧರಿಸಿದ ರಾಜ್ಯ ಸರ್ಕಾರ

Bengaluru: The budget session will be held from February 10 to 24.
Photo Credit : By Author

ಬೆಂಗಳೂರು: ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಿದ ಎರಡು ದಿನಗಳ ನಂತರ ಮೂರು ಇಲಾಖೆಗಳನ್ನು ವಿಲೀನಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರಿಂದ ಸುಮಾರು 2,000 ಉದ್ಯೋಗಗಳು ಕಡಿಮೆಯಾಗಲಿವೆ.

ರಾಜ್ಯ ಸಚಿವ ಸಂಪುಟ ಉಪ ಸಮಿತಿಯು ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಈ ಕುರಿತು ನಿರ್ಧಾರ ಕೈಗೊಂಡಿದೆ. ಸರ್ಕಾರದ ಯೋಜನೇತರ ವೆಚ್ಚವನ್ನು ತಗ್ಗಿಸಲು ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳನ್ನು ವಿಲೀನಗೊಳಿಸಲಾಗುವುದು.

ಎಲ್ಲಾ ನಗರ ಯೋಜನಾ ಮಂಡಳಿಗಳನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ. ಅದರ ಬದಲಾಗಿ ಒಂದು ಜಿಲ್ಲೆಗೆ ಒಂದು ಮಂಡಳಿಯನ್ನು ಮಾತ್ರ ರಚಿಸಲಾಗುವುದು.

ಪ್ರಸ್ತುತ ಜಿಲ್ಲೆಯ ಪ್ರತಿ ಪ್ರದೇಶಕ್ಕೆ ಹತ್ತಾರು ಮಂಡಳಿಗಳನ್ನು ರಚಿಸಲಾಗಿದೆ. ರಾಜ್ಯ ಸರ್ಕಾರದ ಯೋಜನೇತರ ವೆಚ್ಚವನ್ನು ಕಡಿಮೆ ಮಾಡಲು ಸರ್ಕಾರವು ಹಲವಾರು ಇತರ ಇಲಾಖೆಗಳನ್ನು ವಿಲೀನಗೊಳಿಸುವ ಸಾಧ್ಯತೆಯಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು