News Karnataka Kannada
Sunday, May 05 2024
ಬೆಂಗಳೂರು ನಗರ

ಬೆಂಗಳೂರು: ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರಿಗೂ ಆರೋಗ್ಯ ವಿಮೆ ವಿಸ್ತರಿಸಲು ಕ್ರಮ- ಸುಧಾಕರ್

ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸುವುದರ ಮೂಲಕ ನನ್ನ ವೇದನೆ ಕಡಿಮೆ ಮಾಡಿ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಾಜಿ ಸಚಿವ ಡಾ. ಕೆ ಸುಧಾಕರ್ ಮನವಿ ಮಾಡಿದ್ದಾರೆ.
Photo Credit :

ಬೆಂಗಳೂರು: ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರಿಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸಿಹಿಸುದ್ದಿ ನೀಡಿದ್ದು, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ ವೇತನ ಹೆಚ್ಚಳ ಮತ್ತು ಆರೋಗ್ಯ ವಿಮೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ ಗುತ್ತಿಗೆ ನೌಕರರ ಭೇಟಿಯಾಗಿ ಚರ್ಚೆ ನಡೆಸಿದ ಅವರು ಮಾತನಾಡಿ, ಆರೋಗ್ಯ ಇಲಾಖೆ ಗುತ್ತಿಗೆ ನೌಕರರಿಗೆ ಆರೋಗ್ಯ ವಿಮೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗಿದೆ. ವೇತನ ಹೆಚ್ಚಳಕ್ಕೆ ಪ್ರಯತ್ನಿಸಲಾಗಿದೆ ಎಂದು ತಿಳಿಸಿದ್ದಾರೆ.

ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಕಾಯಂ ನೌಕರರಿಗೆ ನೀಡುವಷ್ಟೇ ವೇತನ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದು, ಈ ನೌಕರರು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ವ್ಯಾಪ್ತಿಗೆ ಬರುತ್ತಾರೆ. ರಾಜ್ಯ ಸರ್ಕಾರದದಿಂದಲೇ ಸಮಾನ ವೇತನ ಕೊಡಲು ಸಾಧ್ಯವಾಗುವುದಿಲ್ಲ. ಆದರೆ, ಈಗ ನೌಕರರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು. ಗುತ್ತಿಗೆ ನೌಕರರ ಸಾಧ್ಯವಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸ್ಪಂದಿಸಲಿದೆ ಎಂದು ಭರವಸೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು