ಬೆಂಗಳೂರು: ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಶನಿವಾರ ಭೇಟಿ ಮಾಡಿದ್ದಾರೆ.
ಸದಾಶಿವನಗರದಲ್ಲಿರುವ ತಮ್ಮ ಮನೆಗೆ ಬೆಳಿಗ್ಗೆ ಬಂದ ಸೂರಜ್ ಜೊತೆ ಶಿವಕುಮಾರ್ ಗೌಪ್ಯವಾಗಿ ಮಾತುಕತೆ ನಡೆಸಿದ್ದರು. ಇದೀಗ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸೂರಜ್, ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತು ಉಪ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಲಾಯಿತು ಎಂದರು.