News Karnataka Kannada
Sunday, April 28 2024
ಬೆಂಗಳೂರು ನಗರ

ಜಾತಿ ಗಣತಿ ವರದಿ ಸ್ವೀಕಾರ ಮಾಡುತ್ತೇವೆ ಎಂದ ಸಿಎಂ

The CM said that we will accept the caste census report
Photo Credit : News Kannada

ಬೆಂಗಳೂರು: ಜಾತಿಗಣತಿ ವರದಿಯನ್ನು ನಮ್ಮ ಸರ್ಕಾರ ಸ್ವೀಕಾರ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ. ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ. ಇದಕ್ಕಾಗಿ 165 ಕೋಟಿ ರೂ. ಖರ್ಚು ಮಾಡಿದ್ದೆವು ಎಂದು ತಿಳಿಸಿದರು.

ಜಾತಿ ಗಣತಿ ವರದಿ ನಾನು ಇದ್ದಾಗ ಬಂದಿರಲಿಲ್ಲ. ನಾನು ಹೋದ ಮೇಲೆ ಯಡಿಯೂರಪ್ಪ, ಕುಮಾರಸ್ವಾಮಿ, ಬೊಮ್ಮಾಯಿ ಬಂದರೂ ಅವರು ವರದಿ ಬಿಡುಗಡೆ ಮಾಡಿಲ್ಲ. ಕುಮಾರಸ್ವಾಮಿ ಸಮಯದಲ್ಲಿ ವರದಿ ರೆಡಿ ಆಗಿದೆ. ಅಂದಿನ ಸಚಿವ ಪುಟ್ಟರಂಗಶೆಟ್ಟಿ ವರದಿ ತೆಗೆದುಕೊಳ್ಳೋಕೆ ರೆಡಿ ಇದ್ದರು. ಆದರೆ ಕುಮಾರಸ್ವಾಮಿ ವರದಿ ತೆಗೆದುಕೊಳ್ಳಬೇಡ ಎಂದು ಹೆದರಿಸಿದರು. ಅದಕ್ಕೆ ಪುಟ್ಟರಂಗಶೆಟ್ಟಿ ವರದಿ ಪಡೆಯಲಿಲ್ಲ ಎಂದು ಕುಮಾರಸ್ವಾಮಿ ಮೇಲೆ ಆರೋಪ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು