ಬೆಂಗಳೂರು: ಕಾಂಗ್ರೆಸ್ ಪಕ್ಷ ಸಮಾಜ ಸಮಾಜದ ನಡುವೆ ದ್ವೇಷ ಬಿತ್ತುವ ಕೆಲಸ ಮಾಡುತ್ತಿದೆ. ಇದನ್ನು ರಾಜ್ಯದ ಜನ ಕ್ಷಮಿಸಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಜೆಹಳ್ಳಿ ಕೆಜಿ ಹಳ್ಳಿ ಪ್ರಕರಣದಲ್ಲಿ ಅಪಾಯಕರ ರಕ್ಷಣೆ ಕುರಿತ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಡಿಜೆ ಹಳ್ಳಿ ಕೆಜಿ ಹಳ್ಳಿ ಘಟನೆಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಾಕಿದ ದೇಶದ್ರೋಹಿಗಳ ರಕ್ಷಣೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಬೇರೆ ಬೇರೆ ದೇಶದ್ರೋಹಿಗಳಿಗೂ ರಕ್ಷಣೆ ಮಾಡ್ತೀರಾ?, ಸಮಾಜ ಸಮಾಜದ ನಡುವೆ ದ್ವೇಷ ಬಿತ್ತುವ ಕೆಲಸ ಮಾಡುತ್ತಿರುವುದನ್ನು ರಾಜ್ಯದ ಜನ ಕ್ಷಮಿಸಲ್ಲ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿಯಿಂದ ಅಯೋಧ್ಯೆ ರಾಮಮಂದಿರದ ಪವಿತ್ರ ಮಂತ್ರಾಕ್ಷತೆ ವಿತರಣೆ ಅಭಿಯಾನ ಹಿನ್ನೆಲೆಯಲ್ಲಿ ಇಂದು ವಿಜಯೇಂದ್ರ ಅವರಿಂದ ಮಂತ್ರಾಕ್ಷತೆ ವಿತರಣೆಗೆ ಚಾಲನೆ ನೀಡಲಾಗಿದೆ.