ಬೆಂಗಳೂರು: ರಾಣಿಬೆನ್ನೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್. ಶಂಕರ್ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಆರ್. ಶಂಕರ್ ಅವರು ಬೆಂಬಲಿಗರೊಂದಿಗೆ ಬುಧವಾರ ವಿಧಾನಸೌಧಕ್ಕೆ ಆಗಮಿಸಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.
ಈ ವೇಳೆ ಹೊರಟ್ಟಿ ರಾಜೀನಾಮೆಯನ್ನು ಅಂಗೀಕರಿಸಿದರು. ರಾಜೀನಾಮೆಗೂ ಮುಂಚಿತವಾಗಿ ಮಾತನಾಡಿದ್ದ ಅವರು, ಈ ಬಾರಿಯ ಚುನಾವಣೆಗೆ ಸ್ಪರ್ಧಿಸುವುದಂತು ಖಚಿತ. ಆದರೆ ಯಾವ ಪಕ್ಷವೋ ಅಥವಾ ಪಕ್ಷೇತರವಾಗಿ ಸ್ಪರ್ಧಿಸಬೇಕೋ ಎನ್ನುವುದನ್ನು ಇನ್ನೂ ನಿರ್ಧರಿಸಿಲ್ಲ ಎಂದು ತಿಳಿಸಿದರು.