ಬೆಂಗಳೂರು: ಮದ್ಯದ ದರ ಹೆಚ್ಚಳ ಬಗ್ಗೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಸ್ಪಷ್ಟನೆ ನೀಡಿದ್ದು, ರಾಜ್ಯ ಸರ್ಕಾರದಿಂದ ಯಾವುದೇ ಮದ್ಯದ ದರ ಏರಿಕೆ ಮಾಡಿಲ್ಲ ಎಂದಿದ್ದಾರೆ.
ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು ‘ಮದ್ಯ ಉತ್ಪಾದಕರು ದರ ಹೆಚ್ಚಳ ಮಾಡಿರಬಹುದು. ಆದರೆ, ನಾವಂತೂ ಹೆಚ್ಚಿಸಿಲ್ಲ. ಅಬಕಾರಿ ಶುಲ್ಕ ಹೆಚ್ಚಳ ಮಾಡೋದಾದರೆ ಮೊದಲೇ ಹೇಳುತ್ತೇವೆ. ಇನ್ನು ಬಜೆಟ್ನಲ್ಲೂ ಸದ್ಯ ತೆರಿಗೆ ಹೆಚ್ಚಳದ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಯಾವುದೇ ಟಾರ್ಗೆಟ್ ಕೂಡ ನೀಡಿಲ್ಲ, ಆದರೆ, ಆದಾಯ ಸಂಗ್ರಹದ ಗುರಿ ಇದೆ ಎಂದಿದ್ದಾರೆ.