ಬೆಂಗಳೂರು: ನಕಲಿ ಆಧಾರ್ ಕಾರ್ಡ್ ಬಳಸಿ ಪಶ್ಚಿಮ ಬಂಗಾಳ ಮೂಲಕ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದ ಮೂವರು ಬಾಂಗ್ಲಾ ವಲಸಿಗರನ್ನು ಬೆಂಗಳೂರು ಪೋಲಿಸರು ಬಂಧಿಸಿದ್ದಾರೆ.
ಇವರು ಕಳೆದ ಒಂದು ವರ್ಷದ ಹಿಂದೆ ಬಾಂಗ್ಲಾ ದೇಶದಿಂದ ಭಾರತಕ್ಕೆ ಅಕ್ರಮವಾಗಿ ಬಂದು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದರು. ಬಂಧಿತರನ್ನು ಮೊಹಮ್ಮದ್ ರಫೀಕ್, ಸೈಫುಲಾ ಅಕ್ತರ್ ರೂಪ, ಮೊಹಮ್ಮದ್ ಮುಫೀಜ್ ಶೇಕ್ ಎಂದು ಗುರುತಿಸಲಾಗಿದೆ.
ಇವರುಗಳು ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಭಾರತಕ್ಕೆ ಎಂಟ್ರಿ ನೀಡಿದ್ದಾರೆ. ಏಜೆಂಟ್ ಗಳು ನಕಲಿ ಆಧಾರ್ ಕಾರ್ಡ್ ಮಾಡಿಸಿ ಕೊಟ್ಟಿದ್ದರು.
ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.