News Karnataka Kannada
Saturday, April 13 2024
Cricket
ಬೆಂಗಳೂರು ನಗರ

ಟೆಕ್‌ ಕಂಪನಿ ಎಂಡಿಯನ್ನೆ ಇರಿದು ಕೊಂದ ಟಿಕ್‌ ಟಾಕ್‌ ಸ್ಟಾರ್‌

TikTok star stabbed to death by tech company
Photo Credit : News Kannada

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಫಣಿಂದ್ರ ಸುಬ್ರಹ್ಮಣ್ಯ ಮತ್ತು ಸಿಇಒ ವಿನುಕುಮಾರ್​ ಅವರನ್ನು ಕಂಪನಿಯ ಮಾಜಿ ಉದ್ಯೋಗಿ, ಟಿಕ್ ಟಾಕ್ ಸ್ಟಾರ್ ಜೋಕರ್ ಫೆಲಿಕ್ಸ್ ಎಂಬಾತ ಕೊಲೆ ಮಾಡಿದ ಘಟನೆ ನಗರದ ಅಮೃತಹಳ್ಳಿಯಲ್ಲಿ ಇಂದು ನಡೆದಿದೆ. ​

ಏರೋನಿಕ್ಸ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಫೆಲಿಕ್ಸ್, ಕಂಪನಿಯಿಂದ ಹೊರಬಂದು ಸ್ವಂತ ಕಂಪನಿ ಸ್ಥಾಪಿಸಿದ್ದ. ಈ ಉದ್ಯಮಕ್ಕೆ ಪಣೀಂದ್ರ ಎದುರಾಳಿಯಾಗಿದ್ದನಂತೆ. ಇದೇ ಕಾರಣಕ್ಕೆ ಫೆಲಿಕ್ಸ್, ಎದುರಾಳಿ ಫಣೀಂದ್ರರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾನೆ. ಅದರಂತೆ ಪಂಪಾ ಬಡವಾಣೆಯಲ್ಲಿರುವ ಏರೋನಿಕ್ಸ್ ಕಂಪನಿಗೆ ಇಂದು ಸಂಜೆ 4 ಗಂಟೆ ಸುಮಾರಿಗೆ ಆಗಮಿಸಿ ಪಣೀಂದ್ರ ಹಾಗೂ ವಿನುಕುಮಾರ್ ಮೇಲೆ ತಲ್ವಾರ್​ನಿಂದ ಹಲ್ಲೆ ನಡೆಸಿ ಚಾಕುವಿನಿಂದ ಚುಚ್ಚಿ ಪರಾರಿಯಾಗಿದ್ದಾನೆ.

ತಲ್ವಾರ್ ಮತ್ತು ಚಾಕುವಿನ ಇರಿತದಿಂದ ಗಂಭೀರವಾಗಿ ಗಾಯಗೊಂಡ ಫಣೀಂದ್ರ ಮತ್ತು ವಿನುಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಮೃತಹಳ್ಳಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಫಣಿಂದ್ರ, ವಿನುಕುಮಾರ್ ಮೃತದೇಹಗಳನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು