News Karnataka Kannada
Thursday, May 02 2024
ಬೆಂಗಳೂರು ನಗರ

ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್: ವಿಡಿಯೋ ವೈರಲ್

ಬೆಂಗಳೂರಿನ ಸರ್ಕಾರಿ ಶಾಲೆಯಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಮತ್ತೊಂದು ಘಟನೆ ನಡೆದಿದೆ. ಬೆಂಗಳೂರಿನ ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
Photo Credit : News Kannada

ಬೆಂಗಳೂರು: ಬೆಂಗಳೂರಿನ ಸರ್ಕಾರಿ ಶಾಲೆಯಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಮತ್ತೊಂದು ಘಟನೆ ನಡೆದಿದೆ. ಬೆಂಗಳೂರಿನ ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ವೈರಲ್ ವಿಡಿಯೋದಲ್ಲಿ, ಕೆಲವು ವಿದ್ಯಾರ್ಥಿಗಳು ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವುದು ಕಂಡುಬಂದಿದೆ. ಘಟನೆಯ ನಂತರ, ವಿದ್ಯಾರ್ಥಿಗಳ ಪೋಷಕರು ಶಾಲೆಗೆ ಆಗಮಿಸಿ, ಆವರಣದ ಹೊರಗೆ ಪ್ರತಿಭಟನೆ ನಡೆಸಿ, ಶಿಕ್ಷಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಕೂಡಲೇ ಶಾಲೆಗೆ ಆಗಮಿಸಿದ ಬೆಂಗಳೂರು ಉತ್ತರ ವಿಭಾಗದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ.ಅಂಜನಪ್ಪ ಅವರು, ಪರಿಶೀಲನೆ ನಡೆಸಿ, ತಪ್ಪಿತಸ್ಥ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಘಟನೆಯ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಈ ಬಗ್ಗೆ ವಿಚಾರಿಸಲು ಮಧ್ಯಾಹ್ನ 3 ಗಂಟೆಗೆ ಸಭೆ ಕರೆದಿದ್ದೇನೆ ಮತ್ತು ಈ ವಿಷಯದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು