News Karnataka Kannada
Monday, April 29 2024
ಬೆಂಗಳೂರು ನಗರ

ಬೆಂಗಳೂರಿನಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ

Tomorrow is a holiday for schools and colleges in Bangalore
Photo Credit :

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕನ್ನಡ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್‌ ಗೆ ಕರೆ ನೀಡಿವೆ. ಈ ವಿಚಾರವಾಗಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮಾಹಿತಿ ನೀಡಿದ್ದಾರೆ. ಬಲವಂತದ ಬಂದ್​ಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜತೆಗೆ, ಸೋಮವಾರ ಮಧ್ಯರಾತ್ರಿಯಿಂದ ಮಂಗಳವಾರ ಮಧ್ಯರಾತ್ರಿ ವರೆಗೆ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಹೇರಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ. 60 ಕೆಎಸ್​ಆರ್​ಪಿ, 40 ಸಿಎಆರ್ ತುಕಡಿ ನಿಯೋಜನೆ ಮಾಡುತ್ತೇವೆ. ಅಗತ್ಯವಿದ್ದಲ್ಲಿ ತಮಿಳುನಾಡು ಸಾರಿಗೆ ಬಸ್​ಗಳಿಗೆ ಭದ್ರತೆ ಒದಗಿಸುತ್ತೇವೆ. ಪೊಲೀಸರು, ಕೆಎಸ್​ಆರ್​ಪಿ ಸಿಬ್ಬಂದಿ, ಸ್ಥಳೀಯ ಅಧಿಕಾರಿಗಳು, ಹೊಯ್ಸಳ ಪೊಲೀಸರು ಎಲ್ಲರು ಇರಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಒತ್ತಾಯಪೂರ್ವಕವಾಗಿ ಬಂದ್ ಮಾಡಲು ಅವಕಾಶ ಇಲ್ಲ. ಸಾರ್ವಜನಿಕರು ತಾವೇಗಿಯೇ ಬಂದ್ ಮಾಡಿದರೆ ತೊಂದರೆ ಇಲ್ಲ. ಆದರೆ, ಬಲವಂತವಾಗಿ ಮಾಡುವಂತೆ ಇಲ್ಲ ಎಂದು ಬಿ ದಯಾನಂದ ಹೇಳಿದ್ದಾರೆ. ಸೆ.26ರಂದು ಬೆಂಗಳೂರು ಬಂದ್‌ ಹಿನ್ನಲೆಯಲ್ಲಿ ನಗರದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ದಯಾನಂದ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು