News Karnataka Kannada
Thursday, May 09 2024
ಬೆಂಗಳೂರು ನಗರ

ಬೆಂಗಳೂರಿನಿಂದ ಜೋಗಕ್ಕೆ ಟೂರ್ ಪ್ಯಾಕೇಜ್

Tour package from Bengaluru to Joga
Photo Credit : Wikimedia

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ಜೋಗ ಜಲಪಾತಕ್ಕೆ ಶಿವಮೊಗ್ಗ, ಸಾಗರ ಮಾರ್ಗವಾಗಿ ನಾನ್ ಎಸಿ ಸ್ಲೀಪರ್ ವಾಹನದೊಂದಿಗೆ ವಾರಾಂತ್ಯದ ದಿನಗಳಲ್ಲಿ (ಶುಕ್ರವಾರ ಮತ್ತು ಶನಿವಾರ) ಪ್ಯಾಕೇಜ್‌ಟೂರ್‌ನ್ನು ಜುಲೈ 22 ರಿಂದ ಆರಂಭಿಸಲಾಗಿದೆ.

ಬೆಂಗಳೂರಿನಿಂದ ರಾತ್ರಿ 10.30ಕ್ಕೆ ಹೊರಟು ಸಾಗರಕ್ಕೆ ಬೆಳಿಗ್ಗೆ 5.30ಕ್ಕೆ ತಲುಪಲಿದೆ. ಸಾಗರದಿಂದ ರಾತ್ರಿ 10 ಗಂಟೆಗೆ ಹೊರಟು ಬೆಂಗಳೂರಿಗೆ ಬೆಳಿಗ್ಗೆ 5 ಗಂಟೆಗೆ ಬರಲಿದೆ. ವಾರಾಂತ್ಯದಲ್ಲಿ ಅಂದರೆ ಶುಕ್ರವಾರ ಹಾಗೂ ಶನಿವಾರ ಬೆಂಗಳೂರು-ಜೋಗ ಜಲಪಾತಕ್ಕೆ ಪ್ರಯಾಣಿಸುವ ವಯಸ್ಕರಿಗೆ ರೂ. 2,300 ಹಾಗೂ ಮಕ್ಕಳಿಗೆ (6 ರಿಂದ 12 ವರ್ಷ) ರೂ. 2,100- ದರ ನಿಗಧಿಪಡಿಸಲಾಗಿದೆ ಎಂದು ಕೆಎಸ್ ಆರ್ ಟಿ ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು