News Karnataka Kannada
Tuesday, April 30 2024
ಬೆಂಗಳೂರು ನಗರ

ಟಿ 20 ಪಂದ್ಯ ವೇಳೆ ಪಾಕ್‌ ಪರ ಘೋಷಣೆ: ಇಬ್ಬರು ಅರೆಸ್ಟ್‌

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದ ನಾಲ್ಕನೇ ಟಿ-20 ಪಂದ್ಯದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಜೆಪಿ ನಗರ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
Photo Credit : News Kannada

ಬೆಂಗಳೂರು: ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದ ನಾಲ್ಕನೇ ಟಿ-20 ಪಂದ್ಯದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಜೆಪಿ ನಗರ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಇನಾಯತ್​ವುಲ್ಲಾ ಖಾನ್ ಹಾಗೂ ಸೈಯದ್ ಮುಬಾರಕ್ ಎಂದು ಗುರುತಿಸಲಾಗಿದ್ದು, ಪಬ್​ ಒಂದರಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಪಂದ್ಯ ವೀಕ್ಷಿಸುವ ವೇಳೆ ಇಬ್ಬರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದರು ಎಂದು ತಿಳಿದು ಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಜೆಪಿ ನಗರ ಎರಡನೇ ಹಂತದಲ್ಲಿರುವ ಮೊಹಾಲಿಕಾ ಪಬ್​ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟಿ-20 ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇತರರು ಕೂಡಲೇ ಪೊಲೀಸರಿಗೆ ವಿಚಾರವನ್ನು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು