ಬಿಜೆಪಿ ಆಡಳಿತದಲ್ಲಿ ರಾಜ್ಯಕ್ಕೆ ಭ್ರಷ್ಟಾಚಾರದ ರಾಜಧಾನಿ ಎಂಬ ಕಳಂಕ: ಡಿ.ಕೆ. ಶಿವಕುಮಾರ್‌

ಬೆಂಗಳೂರು: ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ನಡೆದ ಸರಕಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಪಾಲ್ಗೊಂಡರು.
ಈ ವೇಳೆ ಮಾತನಾಡಿದ ಅವರು ರಾಜ್ಯ ಆಡಳಿತದಲ್ಲಿ ನಿಮ್ಮ ಸೇವೆಯ ತೂಕವೇ ಹೆಚ್ಚು. ನಿಮ್ಮ ಸೇವೆ ಅಮೂಲ್ಯ. ಆದರೆ ಕಳೆದ ಮೂರುವರೆ ವರ್ಷದ ಡಬಲ್ ಎಂಜಿನ್ ಸರಕಾರದ ಆಳ್ವಿಕೆಯಲ್ಲಿ ಉತ್ತಮ ಆಡಳಿತ ಎಂಬುದು ಮಾಯವಾಗಿ, ಭ್ರಷ್ಟಾಚಾರದ ರಾಜಧಾನಿ ಎಂಬ ಕಳಂಕ ಬಂದಿದೆ. ದೇಶ ಮಾತ್ರವಲ್ಲ. ಇಡೀ ಜಗತ್ತು ಬೆಂಗಳೂರು ಮೂಲಕ ಭಾರತವನ್ನು ನೋಡುತ್ತಿದೆ. ಅನ್ಯ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದ ಸಂಪನ್ಮೂಲ, ಪ್ರತಿಭೆ, ಆಳ್ವಿಕೆ ಮಾದರಿ ಆದದ್ದು. ದೇವರಾಜ ಅರಸು, ವೀರೇಂದ್ರ ಪಾಟೀಲರ ಕಾಲದಿಂದ ಸಿದ್ದರಾಮಯ್ಯನವರ ಸರಕಾರದ ಅವಧಿವರೆಗೂ ಕರ್ನಾಟಕದ ಆಡಳಿತ ಯಾರೊಬ್ಬರೂ ಬೆರಳು ತೋರಿಸದಷ್ಟು ಉತ್ತಮವಾಗಿತ್ತು.

ರಾಜಕೀಯ ದ್ವೇಷದಿಂದ ನನ್ನ ಮೇಲೆ ಸಿಬಿಐ ಸೇರಿದಂತೆ ತನಿಖಾ ಸಂಸ್ಥೆಗಳನ್ನು ಪ್ರಯೋಗ ಮಾಡಲಾಗಿದೆ. ಚುನಾವಣೆ ಸಮಯದವರೆಗೂ ಈ ಕಾಟ ತಪ್ಪಲಿಲ್ಲ. ಆದರೆ ಜನ ನಮ್ಮ ಪರ ನಿಂತಿದ್ದಾರೆ ಎಂದರು. ಡಬಲ್ ಇಂಜಿನ್ ಸರಕಾರ ಇದ್ದರೂ, 26 ಬಿಜೆಪಿ ಎಂಪಿಗಳು ಇದ್ದರೂ, ರಾಜ್ಯದವರೇ ಕೇಂದ್ರದಲ್ಲಿ ಹಣಕಾಸು ಸಚಿವರಾಗಿದ್ದರೂ ನಮಗೆ ಅನ್ಯಾಯವಾಗಿದೆ. ಆಡಳಿತ ವಿಫಲವಾಗಿದೆ. ಕೇಂದ್ರ ಸರಕಾರ ಏನೆಲ್ಲ ಪ್ರಯೋಗ ಮಾಡಿದರೂ ಜನ ನಮ್ಮ ಮೇಲೆ ಪ್ರೀತಿ, ವಿಶ್ವಾಸ ಇಟ್ಟಿದ್ದಾರೆ. ಇದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ನಾವು ಉತ್ತಮ ಆಡಳಿತ, ಸರಕಾರ ನೀಡಲು ಬದ್ಧರಾಗಿದ್ದೇವೆ. ಅದರಲ್ಲಿ ನಿಮ್ಮ ಪಾಲೂ ಇದೆ. ರಾಜ್ಯಕ್ಕೆ ಅಂಟಿರುವ ಕಳಂಕವನ್ನು ತೊಳೆದು ಹಾಕಲು ನೀವು ನಮ್ಮ ಜತೆ ಕೈ ಜೋಡಿಸಬೇಕು. ರಾಜ್ಯದಲ್ಲಿ ಬದಲಾವಣೆ ಕಾಣುವಂತಹ ಆಳ್ವಿಕೆ ನೀಡಬೇಕು. ನಿಮ್ಮಿಂದ ಪಾಸಿಟಿವ್ ಸಂದೇಶ ತಾಲೂಕು, ಗ್ರಾಮ ಮಟ್ಟದವರೆಗೂ ಹೋಗಬೇಕು ಎಂದು ಹೇಳಿದರು.

Umesha HS

Recent Posts

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

5 mins ago

ಹಾಸನ ವಿಡಿಯೋ ಪ್ರಕರಣ: ಡಿ.ಕೆ. ಶಿವಕುಮಾರ್‌ ಪಿತೂರಿ ಇದೆ ಎಂದ ಎಚ್‌.ಡಿ. ಕುಮಾರಸ್ವಾಮಿ

ಹಾಸನ ಅಶ್ಲೀಲ ವಿಡಿಯೋಗಳ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಪಿತೂರಿ ಎದ್ದು ಕಾಣುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…

20 mins ago

ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

38 mins ago

ನಾಲ್ಕು ವರ್ಷಗಳ ನಂತರ ಧಾರವಾಡಕ್ಕೆ ಕಾಲಿಟ್ಟ ಶಾಸಕ ವಿನಯ್ ಕುಲಕರ್ಣಿ

ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಹೈಕೋರ್ಟ್‌ ಅನುಮತಿ ಮೇರೆಗೆ ಮಂಗಳವಾರ…

57 mins ago

ಲೋಕಸಭೆ ಚುನಾವಣೆ: ಮೂರನೇ ಹಂತದ ಮತದಾನ ಮುಕ್ತಾಯ

ದೇಶದಾದ್ಯಂತ ಮೂರನೇ ಹಂತದ ಮತದಾನ ಮುಕ್ತಾಯವಾಗಿದೆ. ಬೆಳಗ್ಗ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಿತು. ಸಣ್ಣಪುಟ್ಟ ಗಲಾಟೆಗಳನ್ನು…

1 hour ago

ಅನಿಮೇಟೆಡ್ ವಿಡಿಯೋ ‘ತಕ್ಷಣ’ ತೆಗೆದುಹಾಕುವಂತೆ ಬಿಜೆಪಿಗೆ ಚುನಾವಣಾ ಆಯೋಗ ಆದೇಶ

ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವಿಡಿಯೋವನ್ನು 'ತಕ್ಷಣ' ತೆಗೆದುಹಾಕುವಂತೆ…

2 hours ago