ಬೆಂಗಳೂರು: ಯುವ ಶಕ್ತಿ ಇರುವ ನಮ್ಮ ದೇಶದಲ್ಲಿ ನಿರುದ್ಯೋಗ ತಾಂಡವಾಡುತ್ತಿದೆ ಎಂದ ಸಿದ್ದರಾಮಯ್ಯ

ಬೆಂಗಳೂರು: ಭಾರತದಲ್ಲಿ 107 ಕೋಟಿ ಜನರಲ್ಲಿ 40%  ಜನರಿಗೆ ಮಾತ್ರ ಕೆಲಸವಿದೆ. ಮೋದಿ ಪ್ರಧಾನಿಯಾದ ಮೇಲೆ ಯುವಕರಿಗೆ ಕೆಲಸವೇ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಯುವ ಜನೋತ್ಸವ ವಿಸ್ತೃತ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯುವ ಶಕ್ತಿ ಇರುವ ನಮ್ಮ ದೇಶದಲ್ಲಿ ನಿರುದ್ಯೋಗ ತಾಂಡವಾಡುತ್ತಿದೆ. ನಗರದಲ್ಲಿ ಪ್ರದೇಶ 9% ಹಾಗೂ ಗ್ರಾಮೀಣ ಪ್ರದೇಶದಲ್ಲಿ 6 % ನಿರುದ್ಯೋಗ ಸಮಸ್ಯೆ ಉಂಟಾಗಿದೆ. ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಖುದ್ದಾಗಿ ಟ್ವೀಟ್ ಮಾಡಿ 2011 ರಲ್ಲಿ ವಿಶ್ವದ ಆರ್ಥಿಕತೆಯಲ್ಲಿ ಭಾರತ 3ನೇ ಸ್ಥಾನದಲ್ಲಿತ್ತು, ಇವಾಗ ಮೋದಿ ಪ್ರಧಾನಿಯಾದ ಮೇಲೆ ವಿಶ್ವದ ಆರ್ಥಿಕತೆಯಲ್ಲಿ ಭಾರತ 164 ಸ್ಥಾನ ಪಡೆದಿದೆ ಎಂದಿದ್ದಾರೆ ಎಂದರು.

ಕೇಂದ್ರ ಸರ್ಕಾರ ಅಗ್ನಿಪಥ್ ಎಂಬ ಯೋಜನೆ ತಂದಿದ್ದಾರೆ. ಸೇನೆಯಲ್ಲಿ ಯುವಕರಿಗೆ ನಾಲ್ಕು ವರ್ಷ ಕೆಲಸ ಕೊಡುತ್ತಾರಂತೆ. ನಾಲ್ಕು ವರ್ಷ ಮುಗಿದ ಮೇಲೆ ಯುವಕರು ಏನ ಮಾಡಬೇಕು? 17 ವರ್ಷದ ವಯಸ್ಸಿಗೆ ಸೇನೆಗೆ ಸೇರಿ ಯುವಕರು ಅಲ್ಲಿಂದ ಹೊರಗಡೆ ಬಂದ ಮೇಲೆ ಏನು ಮಾಡಬೇಕು ಎಂದು ಪ್ರಶ್ನಿಸಿದರು.

Gayathri SG

Recent Posts

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

7 mins ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

26 mins ago

ಕೆಂಪು ಲಿಪ್​ ಸ್ಟಿಕ್ ಬಳಕೆ ಮೇಲೆ ನಿಷೇಧ ವಿಧಿಸಿದ ಉತ್ತರ ಕೊರಿಯಾ: ಹಚ್ಚಿದರೆ ಕಠಿಣ ಶಿಕ್ಷೆ!

ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್​  ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.

27 mins ago

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

45 mins ago

ಬಿಜೆಪಿ ಮತ್ತೆ ಗೆದ್ದರೆ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್‌

ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ…

50 mins ago

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

1 hour ago