News Karnataka Kannada
Monday, April 29 2024
ಬೆಂಗಳೂರು ನಗರ

ಬೆಂಗಳೂರು: ಇಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

Amit Shah to visit Delhi Police Headquarters today
Photo Credit : Twitter

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆ.3ರ ಬುಧವಾರ ಕರ್ನಾಟಕಕ್ಕೆ ಆಗಮಿಸಲಿದ್ದು, ಸಂಕಲ್ಪ್ ಸೇ ಸಿದ್ಧಿ 3ನೇ ಆವೃತ್ತಿಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬುಧವಾರ ರಾತ್ರಿ 9 ಗಂಟೆಗೆ ಹೊಸದಿಲ್ಲಿಯಿಂದ ಹೊರಟು 11 ಗಂಟೆ ವೇಳೆಗೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ. ರಾಜ್ಯಪಾಲ ಥಾವರಚಂದ್ ಗೆಹಲೋತ್, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಪ್ರಮುಖರು ಸ್ವಾಗತಿಸಲಿದ್ದಾರೆ.

ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ರಾತ್ರಿ 11.30ರ ಹೊತ್ತಿಗೆ ಖಾಸಗಿ ಹೋಟೆಲ್ ತಲುಪಲಿರುವ ಶಾ, ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಗುರುವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ನಡೆಯಲಿರುವ ಸಂಕಲ್ಪ್ ಸೇ ಸಿದ್ಧಿ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಧ್ಯಾಹ್ನ ಭೋಜನ ಮುಗಿಸಿ 2 ಗಂಟೆಗೆ ಹೊಸದಿಲ್ಲಿಯತ್ತ ತೆರಳಲಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು