ಬೆಂಗಳೂರು: ಕೇಂದ್ರದ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಸೌಹಾರ್ದ ಭೇಟಿ ನೀಡಿದರು.
ಕೇಂದ್ರ ಸಚಿವರನ್ನು ಮಾಜಿ ಪ್ರಧಾನಿಗಳ ಕುಟುಂಬ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್ ಅವರು, ಕೆಲ ಹೊತ್ತು ಕುಶಲೋಪರಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.