News Karnataka Kannada
Saturday, May 04 2024
ಬೆಂಗಳೂರು ನಗರ

ಶಾಸನ ಸಭೆಯ ಗೌರವ ಕಾಪಾಡಿ  ಸ್ಪೀಕರ್ ಖಾದರ್ ಗೆ ಉಪರಾಷ್ಟ್ರಪತಿ ಸಲಹೆ

Vice President advises Speaker Khader to maintain dignity of Assembly
Photo Credit : News Kannada

ಬೆಂಗಳೂರು: ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸ್ಪಿಕರ್ ಯು.ಟಿ.ಖಾದರ್ ಅವರು ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ಸೌಹಾರ್ದ ಮಾತುಕತೆ ನಡೆಸಿದರು.

ಇದೇ ವೇಳೆ ಯು.ಟಿ ಖಾದರ್ ಅವರು ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ಹುದ್ದೆಯನ್ನು  ಕಿರಿಯ ವಯಸ್ಸಿನಲ್ಲಿ  ವಹಿಸಿಕೊಂಡಿರುವುದನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮುಕ್ತ ಕಂಠದಿಂದ ಶ್ಲಾಘಿಸಿದರು.

ಈ ಚಿಕ್ಕ ವಯಸ್ಸಿನಲ್ಲೇ ಸಭಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದು ಸುದೈವ.ಸ್ಪೀಕರ್ ಹುದ್ದೆಯಲ್ಲಿ ನಿಮಗೆ ಸಿಗುವ ರಾಜ್ಯ,ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಅನುಭವ,ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಅವರು ಸಲಹೆ ನೀಡಿದರು.

ಸಭಾಧ್ಯಕ್ಷರಾಗಿ ಕಾರ್ಯಸಲ್ಲಿಸುವಷ್ಟು ದಿನ ಸದನದ ಘನತೆ,ಗೌರವ ಎತ್ತಿಹಿಡಿದು ಶಾಸಕರ ಹಾಗೂ ರಾಜ್ಯದ ಜನರ ಮನಗೆಲ್ಲಿ ಎಂದು ಸಲಹೆ ನೀಡಿದರು. ಕರ್ನಾಟಕ ರಾಜ್ಯದ ಜನರ  ಸಂಸ್ಕೃತಿ, ಆಚಾರ ವಿಚಾರದ ಬಗ್ಗೆ ನನಗೆ ಅಪಾರ ಗೌರವವಿದ್ದು ಶಾಸನ ಸಭೆಯ ನಡವಳಿಕೆಯ ಯಾವುದೇ ಮಾರ್ಗದರ್ಶನಕ್ಕಾಗಿ ನಾನು ನಿಮ್ಮೊಂದಿಗೆ ಇದ್ದೇನೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು