ಚುನಾವಣಾ ಸೋಲಿನ ಪರಾಮರ್ಶೆ ಮಾಡಿದ್ದೇವೆ:  ಬಸವರಾಜ ಬೊಮ್ಮಾಯಿ‌

ಬೆಂಗಳೂರು: ಚುನಾವಣೆಯ ಸೋಲು ಏಕೆ ಆಯ್ತು, ಏನು ಆಯ್ತು ಎಂದು ನಾವು ಪರಾಮರ್ಶೆ ಮಾಡಿದ್ದೇವೆ ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಇಂದು ಸುಧಾಕರ್ ಭೇಟಿ ಮಾಡಿದ್ದೀನಿ. ನಮ್ಮ ಜೊತೆ ಕೆಲಸ ಮಾಡಿದವರು ಅಲ್ಪ ಪ್ರಮಾಣದಲ್ಲಿ ಸೋತಿದ್ದಾರೆ. ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇನೆ. ಸೋಲಿನ ಕಾರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ಸೋಮಣ್ಣ ಅವರನ್ನೂ ಭೇಟಿ ಮಾಡುತ್ತೇನೆ ಎಂದರು.

ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನ ಹಗ್ಗಜಗ್ಗಾಟ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಅದು ಅವರ ಪಕ್ಷದ ವಿಚಾರ. ಸಿಎಂ ಯಾರು ಆಗುತ್ತಾರೆ ಎನ್ನುವುದನ್ನು ಕಾಯ್ದು ನೋಡೊಣ ಎಂದರು.

ಡಿಜಿಪಿ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿರುವ ವಿಚಾರ ಪ್ರತಿಕ್ರಿಯಿಸಿ ಅವರು, ಪ್ರವೀಣ್ ಸೂದ್ ನಿರ್ದೇಶಕರನ್ನಾಗಿ ಮಾಡಿರುವುದು ಕೇಂದ್ರ ಸರ್ಕಾರದ ನಿರ್ಧಾರ. ಆಲ್ ಇಂಡಿಯಾ ಸರ್ವೀಸ್ ಇರುವುದರಿಂದ ಅವರು ಮಾಡಿದ್ದಾರೆ ಎಂದರು.

Sneha Gowda

Recent Posts

ವಿವಾದಾತ್ಮಕ ಹೇಳಿಕೆ : ಶಾಸಕ ರಾಜು ಕಾಗೆಗೆ ಚುನಾವಣಾ ಇಲಾಖೆ ನೋಟಿಸ್‌

ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿನ್ನೆ(ಏ.30) ಪ್ರಿಯಾಂಕಾ ಜಾರಕಿಹೊಳಿ‌…

2 hours ago

ಕಾರ್ತಿಕ್​ ಜಯರಾಮ್​ ಹುಟ್ಟುಹಬ್ಬ ಪ್ರಯುಕ್ತ ‘ದಿ ವೀರ್​’​ ಪೋಸ್ಟರ್ ಔಟ್‌

ಸ್ಯಾಂಡಲ್​ವುಡ್​ನ ಖ್ಯಾತ ನಟ ಕಾರ್ತಿಕ್​ ಜಯರಾಮ್​ ಅಲಿಯಾಸ್​ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

2 hours ago

ಕೊಳೆತ ಸ್ಥತಿಯಲ್ಲಿ ಮಹಿಳೆ ಮೃತ ದೇಹ ಪತ್ತೆ

ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ…

3 hours ago

ವಿಜಯ ಸಂಕಲ್ಪ ಸಮಾವೇಶಕ್ಕೆ ಆಗಮಿಸಿದ ಅಮೀತ್ ಶಾಗೆ ಅದ್ದೂರಿ ಸ್ವಾಗತ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರಕ್ಕೆ ಬಂದ ಕೇಂದ್ರ ಗೃಹ ಮಂತ್ರಿ ಅಮೀತ್ ಶಾ ಅವರು ವಿಜಯ…

3 hours ago

ಫಾಲ್ಕೆ ಫಿಲ್ಮ್​ ಫೆಸ್ಟಿವಲ್​ನಲ್ಲಿ ಪ್ರಶಸ್ತಿ ಪಡೆದ ‘ಕೆಂಡ’ ನಿರ್ದೇಶಕ ಸಹದೇವ್ ಕೆಲವಡಿ

ಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ…

3 hours ago

ಕಾಂಗ್ರೆಸ್ ಶಾಸಕನದ್ದು ಎನ್ನಲಾದ ಮತ್ತೊಂದು ಅಶ್ಲೀಲವಿಡಿಯೋ ವೈರಲ್‌

ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊರ್ವ ಶಾಸಕನ ವಿಡಿಯೋ ವೈರಲ್‌ ಆಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ಶಾಸಕರದ್ದು ಎನ್ನಲಾದ…

4 hours ago