ಕನ್ನಡ ಹೋರಾಟಗಾರರನ್ನು ನಾವು ಬೆಂಬಲಿಸಬೇಕು: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕನ್ನಡ ಹೋರಾಟಗಾರರನ್ನು ನಾವು ಬೆಂಬಲಿಸಬೇಕು. ಸರ್ಕಾರ ಸರಿಯಾಗಿ ಕಾನೂನು ಅನುಷ್ಠಾನ ಮಾಡದಿರುವುದಕ್ಕೆ ಕನ್ನಡಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು ಅವರ ನವೀಕೃತ ಸಭಾಂಗಣ ಹಾಗೂ ಕುವೆಂಪು ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಕನ್ನಡ ಹೋರಾಟಗಾರರನ್ನು ಜೈಲಿಗೆ ಹಾಕಿರುವುದು ದುಃಖವಾಗಿದೆ ಎಂದರು.

ನಾನು ಸಿಎಂ ಆಗಿದ್ದಾಗ ಸುಮಾರು ಎರಡು ಸಾವಿರ ಕನ್ನಡ ಹೋರಾಟಗಾರರ ಪ್ರಕರಣಗಳನ್ನು ವಾಪಸ್ ಪಡೆದಿದ್ದೆವು. ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಅನುಷ್ಠಾನ ಮಾಡದಿರುವುದರಿಂದ ಈ ಪರಿಸ್ಥಿತಿ ಬಂದಿದೆ. ಆಡಳಿತಗಾರರಿಗೆ ಸೂಕ್ಷ್ಮತೆ ಇರಬೇಕು ಎಂದು ಹೇಳಿದರು.

ಕುವೆಂಪು ಅವರು ಅಪರೂಪದ ವ್ಯಕ್ತಿತ್ವ. ಒಂದು ರೀತಿಯಲ್ಲಿ ಅವರು ಯುಗಪುರುಷರು ಅಂತ ಹೇಳಲು ಬಯಸುತ್ತೇನೆ. ಅವರನ್ನು ಆಳವಾಗಿ ನೋಡಿದಾಗ ಅತ್ಯಂತ ಮಾನವೀಯ ಗುಣಗಳಿರುವ ವ್ಯಕ್ತಿ. ವಿಸ್ತಾರವಾಗಿ ನೋಡಿದಾಗ ವಿಶ್ವ ಮಾನವರಾಗಿ ಕಾಣುತ್ತಾರೆ ಎಂದರು.

Gayathri SG

Recent Posts

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

10 seconds ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

16 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

28 mins ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

32 mins ago

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

57 mins ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

1 hour ago