ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಯೋಜನೆ ಕುರಿತು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಎತ್ತಿನಹೊಳೆ ಯೋಜನೆಗೆ ಒತ್ತುಕೊಟ್ಟು ನಾವೇ ಪೂರ್ಣಗೊಳಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಜಿಲ್ಲೆಯ ಮಧುಗಿರಿ ರಾಜೀವ್ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕ್ಷೀರಭಾಗ್ಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಧುಗಿರಿಯನ್ನು ಜಿಲ್ಲಾ ಕೇಂದ್ರವಾಗಿ ಮಾಡುವಂತೆ ಕೆ.ಎನ್ ರಾಜಣ್ಣ ಕೇಳಿದ್ದಾರೆ. ಈ ಕುರಿತಾಗಿ ಮಧುಗಿರಿ ಜಿಲ್ಲಾ ಕೇಂದ್ರ ಮಾಡುವ ಬಗ್ಗೆ ಸರ್ಕಾರ ಪರಿಶೀಲನೆ ಮಾಡುತ್ತದೆ. ಮಧುಗಿರಿಯ ಏಕಶಿಲಾ ಬೆಟ್ಟಕ್ಕೆ ರೋಪ್ವೇ ವ್ಯವಸ್ಥೆ ಕಲ್ಪಿಸುತ್ತೇವೆ. ತಾಯಿ ಮಕ್ಕಳ ಆಸ್ಪತ್ರೆಯನ್ನು ಮುಂದಿನ ವರ್ಷ ಮಂಜೂರು ಮಾಡುತ್ತೇವೆ ಎಂದು ಹೇಳಿದರು.