News Karnataka Kannada
Friday, May 03 2024
ಬೆಂಗಳೂರು ನಗರ

ವಿಜಯೇಂದ್ರ ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ- ನಳಿನ್ ಕುಮಾರ್ ಕಟೀಲ್

ಲೋಕಸಭೆ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್​ಗೆ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸದ್ಯ ಈ ಬಗ್ಗೆ ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
Photo Credit : News Kannada

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಶಿಕಾರಿಪುರ ಕ್ಷೇತ್ರದ ಶಾಸಕ ಬಿ. ವೈ. ವಿಜಯೇಂದ್ರ ಬುಧವಾರ ಅಧಿಕಾರವಹಿಸಿಕೊಳ್ಳಲಿದ್ದಾರೆ. ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶ್ರದ್ಧೆಯಿಂದ ದುಡಿದಿದ್ದೇನೆ ಎಂದು ನಿರ್ಗಮಿತ ಪತ್ರದಲ್ಲಿ ಹೇಳಿದ್ದು, ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.

ಈ ಪತ್ರವನ್ನು ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿದ್ದಾರೆ. ಮಾತೃ ಸಮಾನವಾಗಿರುವ ನಮ್ಮ ಪಕ್ಷ ಮತ್ತು ಹಿರಿಯರು ಸಾಮಾನ್ಯ ಕಾರ್ಯಕರ್ತನಾದ ನನಗೆ ಪಕ್ಷದ ರಾಜ್ಯದ ಅತ್ಯುನ್ನತ ಜವಾಬ್ದಾರಿ ವಹಿಸಿದ ಈ 4 ವರ್ಷ 3 ತಿಂಗಳ ಅವಧಿಯಲ್ಲಿ ಈ ಹೊಣೆಗಾರಿಕೆಯನ್ನು ನಿಮ್ಮೆಲ್ಲರ ಸಹಕಾರದಿಂದ ಪರಿಪೂರ್ಣತೆಯಿಂದ ನಿರ್ವಹಿಸಿದ್ದೇನೆ. ಈ ಅವಧಿಯಲ್ಲಿ ಪೂರ್ಣ ಪ್ರಮಾಣದಲ್ಲಿ ಮಾರ್ಗದರ್ಶನ ಮಾಡಿರುವ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜಿಯವರಿಗೆ, ಜವಾಬ್ದಾರಿ ಸ್ವೀಕರಿಸುವ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮತ್ತು ಈಗ ರಾಷ್ಟ್ರೀಯ ಗೃಹಸಚಿವರಾಗಿರುವ ಅಮಿತ್ ಶಾ ಅವರಿಗೆ, ಪಕ್ಷದ ಪ್ರಸ್ತುತ ರಾಷ್ಟ್ರಾಧ್ಯಕ್ಷರಾದ ಜೆ. ಪಿ. ನಡ್ಡಾ ಅವರಿಗೆ, ಹೆಜ್ಜೆಹೆಜ್ಜೆಗೂ ಮಾರ್ಗದರ್ಶನ ನೀಡುತ್ತಾ ಬಂದಿರುವ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಜಯವರಿಗೆ, ನಮ್ಮ ಪಕ್ಷದ ಶಕ್ತಿ ಯಡಿಯೂರಪ್ಪನವರಿಗೆ, ಪಕ್ಷದ ಎಲ್ಲಾ ರಾಷ್ಟ್ರೀಯ ಮತ್ತು ರಾಜ್ಯ ಮುಖಂಡರುಗಳಿಗೆ, ಪಕ್ಷದ ರಾಜ್ಯ ಪದಾಧಿಕಾರಿಗಳಿಗೆ, ಮೋರ್ಚಾಗಳ ಮುಖಂಡರುಗಳಿಗೆ ಹಾಗೂ ವಿಶೇಷವಾಗಿ ನಮ್ಮ ಪಕ್ಷದ ಎಲ್ಲಾ ದೇವದುರ್ಲಭ ಕಾರ್ಯಕರ್ತ ಬಂಧುಗಳಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ನನ್ನ ಈ ಅವಧಿಯಲ್ಲಿ ಕಾಯಾ, ವಾಚಾ, ಮನಸಾ ಪಕ್ಷದ ಸೇವೆ ಮಾಡುವ ಸಂದರ್ಭದಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ನನ್ನ ಕೈ ಹಿಡಿದು ಮುನ್ನಡೆಸಿದ ಎಲ್ಲಾ ಪ್ರೀತಿಪಾತ್ರರಿಗೆ ಧನ್ಯವಾದಗಳು. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಕೃಪೆ, ದೈವದೇವರುಗಳ ಅನುಗ್ರಹದಿಂದ ಪಕ್ಷದ ಬೆಳವಣಿಗೆಗೆ ನನ್ನ ಸೇವೆ ನಿರಂತರವಾಗಿರಲಿದೆ. ಇನ್ನು ಮುಂದೆಯೂ ಸರ್ವರ ಸಹಕಾರ, ಪ್ರೀತಿ, ವಿಶ್ವಾಸ ಬಯಸುವ ನಿಮ್ಮ ನಳಿನ್ ಕುಮಾರ್ ಕಟೀಲ್ ಎಂದು ಹೇಳಿದ್ದಾರೆ. ನನಗೆ ಕೊಟ್ಟ ಸಹಕಾರವನ್ನು ಬಿ.ವೈ.ವಿಜಯೇಂದ್ರಗೂ ಕೊಡಬೇಕು ವಿಜಯೇಂದ್ರಅವರಿಗೆ ಅಧಿಕಾರ ಹಸ್ತಾಂತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್ ಅವರು, ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು