News Karnataka Kannada
Monday, April 29 2024
ಬೆಂಗಳೂರು ನಗರ

ಚೀನಾದಲ್ಲಿ ಹೊಸ ಸೋಂಕು: ರಾಜ್ಯ ಆರೋಗ್ಯ ಇಲಾಖೆ ಹೊರಡಿಸಿದ ಗೈಡ್‌ಲೈನ್ಸ್‌ ನಲ್ಲೇನಿದೆ?

What's in the guidelines issued by the state health department for the new infection in China
Photo Credit : News Kannada

ಬೆಂಗಳೂರು: ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆಯಾದ ಹಿನ್ನೆಲೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ ಮಾಡಿದೆ.

ಗೈಡ್ ಲೈನ್ಸ್ ಹೊರಡಿಸಿದ ಆರೋಗ್ಯ ಇಲಾಖೆ

ಉಸಿರಾಟದ ಕಾಯಿಲೆಗಳ ತಡೆಗಟ್ಟುವಿಕೆ, ನಿಯಂತ್ರಣಕ್ಕಾಗಿ ಸಾರ್ವಜನಿಕರಿಗೆ ಹಲವು ಸೂಚನೆ ನೀಡಿದೆ. ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳುವುದು. ಸಾಬೂನು ಮತ್ತು ನೀರಿನಿಂದ ನಿಮ್ಮ ಕೈಗಳನ್ನು ಆಗಾಗ್ಗೆ ತೊಳೆದುಕೊಳ್ಳುವುದು. ಕಣ್ಣು, ಮೂಗು ಅಥವಾ ಬಾಯಿಯನ್ನು ಅನಗತ್ಯವಾಗಿ ಸ್ಪರ್ಶಿಸುವುದನ್ನು ತಪ್ಪಿಸುವುದು.  ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ ಮತ್ತು ಅಂತಹ ಸ್ಥಳಗಳಿಗೆ ಭೇಟಿ ನೀಡಿದರೆ ಫೇಸ್ ಮಾಸ್ಕ್ ಬಳಸುವುದು. ಫ್ಲೂ ಪೀಡಿತ ವ್ಯಕ್ತಿಗಳಿಂದ ಮೂಲಭೂತ ಕನಿಷ್ಠ ಅಂತರವನ್ನು ಕಾಪಾಡಿಕೊಳ್ಳುವುದು. ನಿದ್ರೆ ಮಾಡಿ, ದೈಹಿಕವಾಗಿ ಕ್ರಿಯಾಶೀಲರಾಗಿ ಮತ್ತು ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಿಕೊಳ್ಳುವುದು. ಸಾಕಷ್ಟು ನೀರು ಕುಡಿಯಿರಿ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸುವುದು.  ಸಾರ್ವಜನಿಕವಾಗಿ ಉಗುಳುವುದನ್ನು ತಪ್ಪಿಸುವುದು. ಇನ್ಫ್ಲುಯೆನ್ಸ ಮತ್ತು ಇತರ ಉಸಿರಾಟದ ಕಾಯಿಲೆಗಳ ಹೆಚ್ಚಿನ ಸಂಭವವಿರುವ ಸ್ಥಳಗಳಿಗೆ ಪ್ರಯಾಣವನ್ನು ತಪ್ಪಿಸುವುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು