ಬೆಂಗಳೂರು: 135 ಸ್ಥಾನಗಳಲ್ಲಿ ಜಯಭೇರಿ ಸಾಧಿಸಿ ಅಧಿಕಾರ ಗದ್ದುಗೆ ಹಿಡಿಯಲು ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಯಾರು ಎಂಬುದರ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಆದರೆ ಗುರುವಾರ ಮೇ 18ರಂದು ಪ್ರಮಾಣ ವಚನ ಸಮಾರಂಭ ನಡೆಯಲಿದೆ ಎಂಬ ಬಗ್ಗೆ ಮಾಹಿತಿ ದೊರೆತಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತೊಂದೆಡೆ ಸಿದ್ದರಾಮಯ್ಯ ಅವರು ಸಿಎಂ ಹುದ್ದೆಯ ರೇಸ್ನಲ್ಲಿದ್ದಾರೆ. ಹೀಗಾಗಿ ಸಿಎಂ ಆಯ್ಕೆಗಾಗಿ ಎಐಸಿಸಿ, ಮೂವರು ವೀಕ್ಷಕರನ್ನು ನೇಮಿಸಿದೆ. ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್ ಹಾಗೂ ದೀಪಕ್ ಬಬಾರಿಯಾ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.
ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಟ್ವೀಟ್ ಮಾಡಿದ್ದು ವೀಕ್ಷಕರಾಗಿ ಆಯ್ಕೆಯಾಗಿರುವ ಸುಶೀಲ್ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್ ಹಾಗೂ ದೀಪಕ್ ಬಬಾರಿಯಾ ಅವರು ಇಂದು(ಮೇ 14) ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಭಾಗವಹಿಸಲಿದ್ದು, ಇವರ ಸಮ್ಮುಖದಲ್ಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ ಎಂದಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.
ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…
ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…
ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…
ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…
ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…