ಬೆಂಗಳೂರು: ಒಳಮೀಸಲಾತಿಯಲ್ಲಿ ಅನ್ಯಾಯ ಖಂಡಿಸಿ ನಡೆಸುತ್ತಿದ್ದ ಹೋರಾಟ ತೀವ್ರತೆ ಪಡೆದುಕೊಂಡಿದ್ದು, ಪ್ರತಿಭಟನಾಕಾರರು ಶಿಕಾರಿಪುರದ ಬಿ.ಎಸ್. ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.
ಅಲ್ಲದೆ ಪಟ್ಟಣದಲ್ಲಿ ಅಳವಡಿಸಿದ್ದ ಬ್ಯಾನರ್ಗಳನ್ನು ಹರಿದು ಹಾಕಲಾಗಿದೆ. ಇತ್ತೀಚೆಗೆ ಒಳಮೀಸಲಾತಿ ಘೋಷಿಸಲಾಗಿದ್ದು, ಇದರಲ್ಲಿ ಅನ್ಯಾಯವಾಗಿದೆ ಎಂದು ಬಂಜಾರ ಸಮುದಾಯದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಕಲ್ಲು ತೂರಾಟ, ಟೈರ್ಗೆ ಬೆಂಕಿ ಹಚ್ಚುವ ಘಟನೆಗಳು ನಡೆದಿವೆ.