News Karnataka Kannada
Thursday, May 09 2024
ಬೆಂಗಳೂರು ನಗರ

ಜನರ ಸಮಸ್ಯೆಗಳನ್ನು ಆಲಿಸಲು ನೀವೂ ಬನ್ನಿ: ಡಿ.ಕೆ.ಶಿಯವರನ್ನು ಆಹ್ವಾನಿಸಿದ ಯಡಿಯೂರಪ್ಪ

You also come to listen to people's problems: Yediyurappa invites DK Shivakumar
Photo Credit : News Kannada

ಬೆಂಗಳೂರು: ‘ಜನರ ಸಮಸ್ಯೆಗಳನ್ನು ಆಲಿಸಲು ಜೊತೆಯಾಗಿ ಹೋಗೋಣ, ನೀವೂ ಬನ್ನಿ’, ಎಂದು ಡಿ.ಕೆ.ಶಿಯವರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಹ್ವಾನಿಸಿದ್ದಾರೆ.

ಅವರು ಶನಿವಾರ(ನ.11) ರಂದು ದಾಸರಹಳ್ಳಿ ಕ್ಷೇತ್ರದಲ್ಲಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಮತ್ತು ಬರಗಾಲ ಪರಿಸ್ಥಿತಿ ಅಧ್ಯಯನ ನಡೆಸಿದ ಬಳಿಕ, ದಾಸರಹಳ್ಳಿ ಕ್ಷೇತ್ರದ ಪರಿಶೀಲನೆ ಮಾಡಿ, ರಸ್ತೆ ಕೆಲಸಗಳನ್ನು ಗಮನಿಸಿದ್ದೇನೆ. ಚಿಕ್ಕಬಾಣಾವರ ಕೆರೆ ಯಾವ ಸ್ಥಿತಿಯಲ್ಲಿದೆ ಎಂಬುದನ್ನು ವೀಕ್ಷಿಸಿದ್ದೇನೆ ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ. ರಸ್ತೆ ಹಾಳಾಗಿದೆ, ಕುಡಿಯುವ ನೀರಿನ ಸಮಸ್ಯೆ ಇದೆ. ಕೆರೆ ಹೂಳು ತುಂಬಿದೆ. ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿಲ್ಲ. ಈ ಎಲ್ಲಾ ವಿಷಯದ ಬಗ್ಗೆ ಶಿವಕುಮಾರ್ ಗಮನಿಸಬೇಕು ಎಂದು ಆಗ್ರಹಿಸಿದರು. ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ. ಮುಖ್ಯಮಂತ್ರಿ ನಗರೋತ್ಥಾನ ಅಭಿವೃದ್ಧಿ ಅಡಿಯಲ್ಲಿ 110 ಹಳ್ಳಿಗೆ ಬಿಡುಗಡೆಯಾಗಿದ್ದ ಹಣ ವಾಪಸ್ ಪಡೆದಿದ್ದಾರೆ. ತಕ್ಷಣ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದರು.

ಪೀಣ್ಯ ಕೈಗಾರಿಕಾ ಪ್ರದೇಶವು ಏಷ್ಯಾದಲ್ಲಿಯೇ ಅತಿ ಹೆಚ್ಚು ತೆರಿಗೆ ನೀಡುತ್ತದೆ. ಆ ಪ್ರದೇಶವನ್ನೇ ಸರ್ಕಾರ ಕಡೆಗಣನೆ ಮಾಡಿದೆ. ಕಾವೇರಿ ನೀರು ಸರಬರಾಜು ಸರಿಯಾಗಿ ನಡೆದಿಲ್ಲ. ಒಳಚರಂಡಿ ಸಂಪೂರ್ಣ ಹಾಳಾಗಿದೆ. ರಸ್ತೆ ಗುಂಡಿ ಮುಚ್ಚುವ ಕೆಲಸ ನಡೆಯುತ್ತಿಲ್ಲ. ಚಿಕ್ಕಬಾಣಾವರ ಕೆರೆ ಒಳಚರಂಡಿ, ತಾಜ್ಯದಿಂದ ತುಂಬಿದೆ. ಇದರ ಪುನರುಜ್ಜೀವನ ಮಾಡುವ ನಿಟ್ಟಿಗೆ ಮುಂದಾಗಬೇಕಿದೆ. ಕೆಆರ್‌ಐಡಿಎಲ್ ಮೂಲಕ ಅಭಿವೃದ್ದಿ ಮಾಡಬೇಕಿದೆ. ಶಿವಕುಮಾರ್ ಅವರು ಉಸ್ತುವಾರಿ ಇದ್ದಾರೆ. ಇದಕ್ಕೆ ಹಣ ಕೊಡಲು ಸಾಧ್ಯವಾಗುವುದಿಲ್ಲವೇ? ಈ ಸರ್ಕಾರ ದಿವಾಳಿಯಾಗಿದೆಯೇ? ಎಂದು ಕಿಡಿ ಕಾರಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು