ನೆಲಮಂಗಲ: ಬೆಂಗಳೂರು ಗ್ರಾ. ಜಿಲ್ಲೆ ನೆಲಮಂಗಲದ ಸುಭಾಷ್ ನಗರದಲ್ಲಿ ಯುವಕನೋರ್ವ ತಾನು ಪ್ರೀತಿಸಿದ ಹುಡುಗಿ ಬೇರೊಬ್ಬರ ಜೊತೆ ಮದುವೆಯಾದಳು ಎಂಬ ಕಾರಣಕ್ಕೆ ಮನನೊಂದು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ಯುವಕನನ್ನು ಪ್ರವೀಣ್(30) ಎಂದು ಗುರುತಿಸಲಾಗಿದೆ. ಈತ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ಪ್ರವೀಣ್ ಎರಡು ವರ್ಷದಿಂದ ಪ್ರೀತಿಸುತ್ತಿದ್ದ ಯುವತಿ ಜೊತೆ ಲವ್ ಬ್ರೇಕಪ್ ಆಗಿತ್ತು. ಅಲ್ಲದೆ ತಾನು ಪ್ರೀತಿಸುತ್ತಿದ್ದ ಯುವತಿ ಬೇರೊಬ್ಬರ ಜತೆ ವಿವಾಹವಾದಳು. ಇದರಿಂದ ನೊಂದಿದ್ದ ಯುವಕ ಕಳೆದ 6 ತಿಂಗಳಿಂದ ಯುವತಿಯ ನೆನಪಲ್ಲೇ ಇದ್ದ ಎನ್ನಲಾಗಿದೆ. ಈ ಪ್ರಕರಣದ ನೆಲಮಂಗಲ ಟೌನ್ ಠಾಣೆಯಲ್ಲಿ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821