ಬೆಂಗಳೂರು: ಹೈಕಮಾಂಡ್ ಮೇಲಿನ ಅತಿ ಅವಲಂಬನೆ ಸೋಲಿಗೆ ಕಾರಣ, ಪರಾಜಿತ ಅಭ್ಯರ್ಥಿಗಳ ಅಭಿಪ್ರಾಯ

ಬೆಂಗಳೂರು: ಬಿಜೆಪಿಯು ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಗುರುವಾರ ಮಾಡಲಾಗಿದೆ. ನಗರದ ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪರಾಜಿತ ಅಭ್ಯರ್ಥಿಗಳು ಬಿಜೆಪಿ ಸೋಲಿಗೆ ಕಾರಣಗಳನ್ನು ಬಿಚ್ಚಿಟ್ಟಿದ್ದಾರೆ. ಜೊತೆಗೆ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

ಬಿಜೆಪಿ ಸೋಲಿಗೆ ಪರಾಜಿತ ಅಭ್ಯರ್ಥಿಗಳ ಸೋಲಿಗೆ ಕಾರಣಗಳ ಪಟ್ಟಿ ಹೀಗಿದೆ. ಕಾಂಗ್ರೆಸ್​ನ ಗ್ಯಾರಂಟಿ ಯೋಜನೆಗಳು ಬಿಜೆಪಿ ಸೋಲಿಗೆ ಕಾರಣ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ. ಈ ಯೋಜನೆಗಳು ಜನಮಾನಸವನ್ನು ತಲುಪುವಲ್ಲಿ ಸಫಲವಾಗಿದ್ದು ಬಿಜೆಪಿಗೆ ನೇರ ಹೊಡೆತ ಬಿದ್ದಿದೆ ಎಂದು ಹೇಳಿದ್ದಾರೆ. ಒಳ ಮೀಸಲಾತಿ ಹಂಚಿಕೆಯಿಂದ ಪಕ್ಷಕ್ಕೆ ಹಿನ್ನಡೆಯಾಗಿದ್ದು, ಮತಗಳಿಕೆ ಪ್ರಮಾಣ ಕಡಿಮೆಯಾಗಿದೆ.

ಅದೇರೀತಿ 40 ಶೇ. ಕಮೀಷನ್ ಆರೋಪ ಸೇರಿ ಕೆಲವು ಭ್ರಷ್ಟಾಚಾರ ಆರೋಪ ಪ್ರಕರಣಗಳು ಬಿಜೆಪಿ ಹಿನ್ನಡೆಗೆ ಕಾರಣವಾಗಿದೆ. ಅಲ್ಲಲ್ಲಿ ಬೀಸಿದ ವಿರೋಧಿ ಅಲೆಯೂ ಕೂಡ ದುಷ್ಪರಿಣಾಮ ಬೀರಿದೆ. ಟಿಕೆಟ್ ಹಂಚಿಕೆಯಲ್ಲಿನ ವಿಳಂಬ ನೀತಿಯಿಂದ ಸಂಘಟನೆ ಪ್ರಚಾರಕ್ಕೆ ತೊಂದರೆಯಾಗಿದ್ದು, ಕೂಡ ಕೆಲ ಅಭ್ಯರ್ಥಿಗಳು ಸೋಲಲು ಕಾರಣವಾಗಿದೆ. ತಳಮಟ್ಟದ ಸಂಘಟನೆ ಬಿಟ್ಟು ಕೇವಲ ಹೈಕಮಾಂಡ್ ಮೇಲಿನ ಹೆಚ್ಚಿನ ಅವಲಂಬನೆ ಕೂಡ ಹಿನ್ನಡೆಗೆ ಕಾರಣವಾಗಿದೆ.

ಸಚಿವರು ಅಧಿಕಾರವಿದ್ದಾಗ ಸರಿಯಾಗಿ ಸ್ಪಂದಿಸಲಿಲ್ಲ ಇದು ಕೂಡ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಲು ಕಾರಣವಾಯಿತು. ಪಕ್ಷದ ಮುಖಂಡರು ಅಭ್ಯರ್ಥಿಗಳ ಮಾತಿಗೆ ಬೆಲೆ ಕೊಡದೇ ಆಡಿದ್ದೇ ಆಟ ಎಂಬ ನಿಲುವು ಕೂಡ ಪಕ್ಷ ಹೀನಾಯ ಸ್ಥಿತಿ ತಲುಪಲು ಕಾರಣವಾಯಿತು. ಲಕ್ಷ್ಮಣ ಸವದಿ ಪಕ್ಷ ಬಿಟ್ಟಿದ್ದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಡೆತ ನೀಡಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಅಕ್ಕಿ ಕೊಡುವುದನ್ನು ಕಡಿಮೆ ಮಾಡಿದ್ದೂ ಸೋಲಿನ ಹಲವು ಕಾರಣಗಳಲ್ಲೊಂದು ಎಂದು ಸೋತ ನಾಯಕರು ಅಭಿಪ್ರಾಯ ಪಟ್ಟಿದ್ದಾರೆ.

Ashika S

Recent Posts

ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಹೃದಯಾಘಾತದಿಂದ ನಿಧನ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ನಿನ್ನೆ  ರಾತ್ರಿ 1.20ಕ್ಕೆ ನಿಧನರಾಗಿದ್ದಾರೆ.

6 mins ago

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

7 hours ago

ಅಧಿಕಾರಕ್ಕಾಗಿ ಮಾನವಿಯತೆ ಮರೆತಿದ್ದಾರೆ ಖಂಡ್ರೆ : ಭಗವಂತ ಖೂಬಾ

ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…

8 hours ago

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…

8 hours ago

ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…

8 hours ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…

8 hours ago