News Karnataka Kannada
Friday, May 03 2024
ಬೆಂಗಳೂರು

ಬೆಂಗಳೂರು: ಡಿ.23ಕ್ಕೆ ಪಿಎಸ್‌ಐ ನೇಮಕಾತಿ ಪರೀಕ್ಷೆ

Bengaluru: PSI recruitment exam slated to be held on December 23
Photo Credit : News Kannada

ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಅಕ್ರಮ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ಮರು ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದ ಬೆನ್ನಲ್ಲೇ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪರೀಕ್ಷೆ ದಿನಾಂಕವನ್ನು ಘೋಷಿಸಿದೆ.

ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಪರೀಕ್ಷೆ ಡಿಸೆಂಬರ್ 23ರಂದು ಬೆಂಗಳೂರಿನಲ್ಲಿ ನಡೆಸಲಿದೆ. ಹೈಕೋರ್ಟ್ ಆದೇಶದ ಮೇರೆಗೆ ಪಿಎಸ್ ಐ ಮರು ಪರೀಕ್ಷೆ ನಡೆಸಲಾಗುತ್ತಿದ್ದು, ಹಿಂದಿನ ಪರೀಕ್ಷೆಯಲ್ಲಿ ಪರೀಕ್ಷೆಗೆ ಹಾಜರಾಗಲು ಅರ್ಹತೆ ಪಡೆದವರು ಮರು ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2021ರ ಜನವರಿ 21ರಂದು ಪೊಲೀಸ್ ಇಲಾಖೆಯು 545 PSI ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿತ್ತು. 2021ರ ಅಕ್ಟೋಬರ್ 31ರಂದು ಲಿಖಿತ ಪರೀಕ್ಷೆ ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಳಿಕ ಪರೀಕ್ಷೆ ವಿವಾದ ಭಾರಿ ಸುದ್ದಿಯಾಗಿತ್ತು. ಈ ಅಕ್ರಮದಲ್ಲಿ ಹಲವು ನಾಯಕರ ಹೆಸರು ಕೇಳಿಬಂದಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು