ಕೆಫೆ ಬ್ಲಾಸ್ಟ್‌ ನಡೆಸಿದವನ ಸುಳಿವು ಪತ್ತೆ: ಕೆಫೆ-ಕುಕ್ಕರ್ ಬ್ಲಾಸ್ಟ್‌ಗೂ ಇದೆ ನಂಟು !

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ನ ಉಗ್ರನ ಜಾಡು ಹಿಡಿದು ಹೊರಟಿದ್ದ ಎನ್‌ಐಎ, ಮೇಜರ್​​ ಆಪರೇಷನ್​​ ಮಾಡಿದೆ. ಬಾಂಬರ್‌ಗೆ ಸಹಾಯ ಮಾಡಿದ್ದವ ಬಲೆಗೆ ಬಿದ್ದಿದ್ದಾನೆ.

ಹೌದು. . ಕಳೆದ ದಿನ ಕರ್ನಾಟಕ, ತಮಿಳುನಾಡು ಹಾಗೂ ಉತ್ತರಪ್ರದೇಶದ 18 ಕಡೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ರು. ಈ ವೇಳೆ ಕೆಫೆ ಬ್ಲಾಸ್ಟ್‌ನ ಬಾಂಬರ್‌ಗೆ ಸಹಾಯ ಮಾಡಿದ್ದ ಮುಜಾಮಿಲ್ ಶರೀಫ್ ಎಂಬಾತನನ್ನ ಅರೆಸ್ಟ್ ಮಾಡಿದೆ. ತನಿಖೆ ವೇಳೆ ಕೆಫೆಯಲ್ಲಿ ಬಾಂಬ್ ಇಟ್ಟಿರೋದು ಮುಸಾವೀರ್ ಶಾಜೀಬ್ ಹುಸೇನ್ ಎಂಬ ಉಗ್ರ ಅಂತ ಮುಜಾಮಿಲ್ ಶರೀಫ್ ಬಾಯ್ಬಿಟ್ಟಿದ್ದಾನೆ.

ಮುಸಾವೀರ್ ಶಾಜೀಬ್ ಹುಸೇನ್ ಕಳಸ ಮೂಲದವನು. ಈತ ಬೆಂಗಳೂರಲ್ಲಿರೋ ಚಿಕನ್ ಕೌಂಟಿಯಲ್ಲಿ ಕೆಲಸ ಮಾಡ್ತಿದ್ದ. ಚಿಕ್ಕಮಗಳೂರಿನಲ್ಲಿ ವರ್ಷದಿಂದ ತಾಯಿ ಮತ್ತು ತಂಗಿ ಜೊತೆ ಬಾಡಿಗೆ ಮನೆಯಲ್ಲಿ ವಾಸವಿದ್ದ. ಮುಜಾವೀರ್ ಪತ್ನಿ ಗರ್ಭಿಣಿ ಆಗಿದ್ದು, ಆಕೆ ಮಂಗಳೂರಲ್ಲಿ ನೆಲೆಸಿದ್ದಾಳೆ. ದಾಳಿ ವೇಳೆ ಉಗ್ರನ ತಾಯಿಯ ಮೊಬೈಲ್​ಅನ್ನ ಎನ್‌ಐಎ ವಶಕ್ಕೆ ಪಡೆದಿದೆ. ಮುಸಾವೀರ್ ಹಾಗೂ ಅಬ್ದುಲ್ ಮತೀನ್ ತಾಹಾ ಸೇರಿ ಬ್ಲಾಸ್ಟ್‌ಗೆ ಸಂಚು ರೂಪಿಸಿದ್ದಾರೆಂಬ ಮಾಹಿತಿ ಬಹಿರಂಗವಾಗಿದೆ.

ಇನ್ನು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಅಬ್ದುಲ್ ಮತೀನ್ ತಾಹಾ ಅಲ್ ಹಿಂದ್ ಸಂಘಟನೆಯ ಪ್ರಮುಖ ಸದಸ್ಯ ಎಂಬುದು ತಿಳಿದು ಬಂದಿದೆ.ಅಲ್ದೇ ಮಂಗಳೂರು ಕುಕ್ಕರ್ ಬ್ಲಾಸ್ಟ್‌ ಆರೋಪಿಗೂ ಈತನೇ ಗೈಡ್‌ ಆಗಿದ್ದ ಎಂಬುದು ತಿಳಿದು ಬಂದೆ.

Ashitha S

Recent Posts

ಕರ್ನಾಟಕದ ಎಲ್ಲಾ ಭಾಷೆಗಳಲ್ಲಿಯೇ ವೈಶಿಷ್ಟ್ಯ ಪಡೆದ ಲಂಬಾಣಿ ಭಾಷೆ

ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ…

7 mins ago

ಜಿಲ್ಲಾಧಿಕಾರಿಗಳಿಂದ ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…

24 mins ago

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

35 mins ago

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

50 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

1 hour ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

2 hours ago