ಬೆಂಗಳೂರು

ಬೆಂಗಳೂರು: ಸಾಲ ಮನ್ನಾ ಯೋಜನೆಗೆ 553.24 ಕೋಟಿ ರೂ. ಅನುದಾನ ಬಿಡುಗಡೆ

ಬೆಂಗಳೂರು: ಸಹಕಾರ ಸಂಘಗಳ ರೂ1 ಲಕ್ಷ ವರಗಿನ ಸಾಲ ಮನ್ನಾ ಯೋಜನೆಯಲ್ಲಿ ಬಾಕಿ ಇದ್ದ 1.05 ಲಕ್ಷ ರೈತರಿಗೆ ರೂ 553.24 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ, ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳಿ ನಿ, ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾ ಮಂಡಳಿ ನಿ,ಕರ್ನಾಟಕ ರಾಜ್ಯ ಸಹಕಾರ ಮಹಿಳಾ ಮಹಾ ಮಂಡಳಿ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟ, ಸಹಕಾರ ಇಲಾಖೆ ಹಾಗೂ ಎಲ್ಲಾ ರೀತಿಯ ಸಹಕಾರ ಸಂಘಗಳು, ಸೌಹಾರ್ದ ಸಹಕಾರಿ ಇವರುಗಳು ಸಹಯೋಗದಲ್ಲಿ ಹಮ್ಮಿಕೊಳ್ಳಲಾದ’ 69 ನೇ  ಅಖಿಲ ಭಾರತ ಸಹಕಾರ ಸಪ್ತಾಹ  ಹಾಗೂ ‘ಸಹಕಾರ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೋವಿಡ್ ಎರಡನೇ ಅಲೆಯಲ್ಲಿ 6.17 ಲಕ್ಷ ರೈತರಿಗೆ ಮತ್ತು 0.66 ಲಕ್ಷ ಸ್ವಸಹಾಯ ಗುಂಪುಗಳಿಗೆ 2021 ಮಾರ್ಚ್ ನಿಂದ ಡಿಸೆಂಬರ್ ವರೆಗೆ ಮರುಪಾವತಿಗೆ ಬರುವ ಕಂತು ಮುಂದೂಡಿ ಇದರ 102 ಕೋಟಿ ಬಡ್ಡಿ ಯನ್ನು ಪತ್ತಿನ ಸಹಕಾರ ಸಂಸ್ಥೆಗಳಿಗೆ ಭರಿಸಲಾಗಿದೆ. ಯಶಸ್ವಿನಿ ಯೋಜನೆಯನ್ನು ನವೆಂಬರ್ 14 ರಿಂದ ಮರುಜಾರಿಗೊಳಿಸಲಾಗಿದೆ. ಆಯುಷ್ಮಾನ್ ಆರೋಗ್ಯ  ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು

‘ಸಹಕಾರ ರತ್ನ’ ಪ್ರಶಸ್ತಿ ಪಡೆದವರಿಗೆ ಅಭಿನಂದನೆ ಸಲ್ಲಿಸಿದ ಸಭಾಧ್ಯಕ್ಷರು,ಎಲ್ಲರೂ ಸಮಾಜ ಮುಖಿಯಾಗಿ ಕೆಲಸ ಮಾಡಬೇಕು. ಸಹಕಾರ ಕ್ಷೇತ್ರ ಈಗ ಬೆಳೆದಿದೆ. ಅದಕ್ಕೆ ಸವಾಲುಗಳು ಸಹ ಹೆಚ್ಚಿದೆ. ಇದನ್ನು ಸಕಾರಗೊಳಿಸಲು ಎಲ್ಲರೂ ಪ್ರಯತ್ನಿಸಬೇಕೆಂದರು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ಸಹಕಾರ ಸಪ್ತಾಹವನ್ನು ನವೆಂಬರ್ 14 ರಿಂದ 20 ರವರೆಗೆ ರಾಜ್ಯದಲ್ಲಿ ಹಮ್ಮಿಕೊಳ್ಳಲಾಗಿದೆ. ಕಲಬುರಗಿ ಯಲ್ಲಿ ಉದ್ಘಾಟನೆಗೊಂಡ ಸಪ್ತಾಹ ಮೈಸೂರಿನಲ್ಲಿ ಸಮಾರೋಪಗೊಳ್ಳಲಿದೆ.2021-22 ರಲ್ಲಿ 28.42 ಲಕ್ಷ ರೈತರಿಗೆ 20,972 ಕೋಟಿ ಕೃಷಿ ಸಾಲ ವಿತರಿಸಲಾಗಿದೆ. 2022-23 ರಲ್ಲಿ 33 ಲಕ್ಷ ರೈತರಿಗೆ 24 ಕೋಟಿ ರೂ ಕೃಷಿ ಸಾಲದ ಗುರಿ ಹೊಂದಲಾಗಿದ್ದು, ಪ್ರಸ್ತುತ 15.73 ಲಕ್ಷ ರೈತರಿಗೆ 12,022 ಕೋಟಿ ಪಾವತಿಸಲಾಗಿದೆ.  ಹಾಲು ಒಕ್ಕೂಟಗಳ  ಮಹಿಳೆಯರಿಗೆ ಸಾಲ ಸೌಲಭ್ಯ ಸಿಗಲಿದೆ. ಸುಮಾರು 11,000 ಬೀದಿ ಬದಿ ವ್ಯಾಪಾರಿಗಳಿಗೆ ಬಡವರ ಬಂಧು ಯೋಜನೆಯಡಿ ಮಾರ್ಚ್ 2021ರ ಅಂತ್ಯಕ್ಕೆ 7.56 ಕೋಟಿ ಸಾಲ ಮನ್ನಾ ಮಾಡಲಾಗಿದೆ. ಕೋವಿಡ್ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಹಕಾರ ಸಂಸ್ಥೆಗಳು 53 ಕೋಟಿ ದೇಣಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ 12.75 ಕೋಟಿ ನೆರವು ನೀಡಿದೆ ಎಂದರು.

ಇದೇ ವೇಳೆ 54 ಜನರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಯಶಸ್ವಿನಿ ಕಾರ್ಡ್ ಹಾಗೂ ಸಹಕಾರ ವಾರ ಪತ್ರಿಕೆಯನ್ನು ಗಣ್ಯರು ಬಿಡುಗಡೆಗೊಳಿಸಿದರು. ಶಾಸಕರಾದ ಜಿ.ಟಿ.ದೇವೇಗೌಡ ಪ್ರಾಸ್ತಾವಿಕ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾ ಮಂಡಳಿ ಅಧ್ಯಕ್ಷರಾದ ಜಿ.ಪಿ. ಪಾಟೀಲ್, ಕರ್ನಾಟಕ ರಾಜ್ಯ ಸಹಕಾರಿ ಮತ್ತು ಕೃಷಿ ಮತ್ತು ಗ್ರಾಮೀಣ ಬ್ಯಾಂಕ್ ಅಧ್ಯಕ್ಷರಾದ ಕೃಷ್ಣಕುಮಾರ್.ಡಿ, ರಾಜ್ಯ ಮಹಿಳಾ ಸಹಕಾರ ಮಹಾ ಮಂಡಲದ ಅಧ್ಯಕ್ಷೆ ಶಕುಂತಲಾ.ಕೆ.ಬೆಲ್ದಾಳೆ, ರಾಜ್ಯ ಸಹಕಾರ ತೋಟಗಾರಿಕಾ ಮಹಾಮಂಡಲ ಅಧ್ಯಕ್ಷರಾದ ಡಾ.ಬಿ.ಡಿ.ಭೂಕಾಂತ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

4 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

5 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

5 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

5 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

6 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

6 hours ago