ಬೆಂಗಳೂರು: ಸೆ.6 ರಂದು ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು: ಪ್ರಪ್ರಥಮ ಬಾರಿಗೆ ರಾಜ್ಯ ಸರ್ಕಾರದ ವತಿಯಿಂದ  ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಸೆಪ್ಟೆಂಬರ್ 6 ರಂದು ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಜೊತೆಗೆ ರಾಜ್ಯ ಸರ್ಕಾರಿ ಸೇವೆಯಲ್ಲಿ ಅನುಪಮ ಸೇವೆ ಸಲ್ಲಿಸಿ ಗಮನಾರ್ಹ ಸಾಧನೆ ಮಾಡಿರುವ 30 ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ ಇದೇ ಸಂದರ್ಭದಲ್ಲಿ 2022ನೇ ಸಾಲಿನ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆಡಳಿತ ಸುಧಾರಣಾ ವಿಭಾಗದ ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀವತ್ಸ ಕೃಷ್ಣ ಅವರು ಮಾಹಿತಿ ನೀಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿರುವ ಈ ಎರಡೂ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ. ಅಲ್ಲದೆ, ಈಗಾಗಲೇ ಆಯ್ಕೆಯಾಗಿರುವ ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ರಾಜ್ಯ ಸಚಿವ ಸಂಪುಟದ ಸದಸ್ಯರು, ಸಂಸದರು, ಶಾಸಕರು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಒಳಗೊಂಡಂತೆ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳು, ಕರ್ನಾಟಕ ರಾಜ್ಯ  ಸರ್ಕಾರಿ ನೌಕರರಸಂಘದ ಅಧ್ಯಕ್ಷ ಷಡಾಕ್ಷರಿ ಸೇರಿದಂತೆ ಸಂಘದ ಪದಾಧಿಕಾರಿಗಳು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸೆಪ್ಟೆಂಬರ್ 6 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೇಟ್  ಸಭಾಂಗಣದಲ್ಲಿ ನಡೆಯಲಿರುವ ಈ ಸಮಾರಂಭಕ್ಕೆ  ಹಾಜರಾಗುವ ಸರ್ಕಾರಿ ನೌಕರರಿಗೆ ಅರ್ಧ ದಿನದ ವಿಶೇಷ ಸಾಂದರ್ಭಿಕ ರಜೆಯ ಸೌಲಭ್ಯವನ್ನೂ ಕಲ್ಪಿಸಲಾಗಿದೆ.

Ashika S

Recent Posts

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

8 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

14 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

26 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

37 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

57 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

1 hour ago