ಬೆಂಗಳೂರು: ಮೇ 31ರಿಂದ ಶಾಲಾ ತರಗತಿಗಳು ಆರಂಭ

ಬೆಂಗಳೂರು: ಶಾಲೆಗಳು ಮೇ 31 ರಿಂದ ಆರಂಭವಾಗಬೇಕಾಗಿದ್ದು, ಈ ನಿಟ್ಟಿನಲ್ಲಿ ಶಾಲಾ ಪ್ರಾರಂಭೋತ್ಸವ ಆಯೋಜನೆಗೆ ಇಲಾಖೆ ಸೂಚಿಸಿದೆ. ಅದೇರೀತಿ ಶಿಕ್ಷಕರಿಗೆ ಕಳೆದ ಸಾಲಿನಲ್ಲಿ ನಡೆಸಿದ ಮೌಲ್ಯಂಕನ ವಿಶ್ಲೇಷಣೆ ಪರೀಕ್ಷೆ ವರದಿ ಒದಗಿಸಲಾಗುತ್ತದೆ. ಯಾವ ವಿಷಯದಲ್ಲಿ ವಿದ್ಯಾರ್ಥಿಗಳು ಹಿಂದುಳಿದ್ದಿದ್ದಾರೆ ಎಂಬ ಮಾಹಿತಿ ನೀಡಲಾಗುತ್ತದೆ. ಅದನ್ನು ಅವಲೋಕಿಸಿ ನೈದಾನಿಕ ಪರೀಕ್ಷೆ ಹಮ್ಮಿಕೊಂಡು ಫಲಿತಾಂಶ ವಿಶ್ಲೇಷಿಸಬೇಕೆಂದು ಶಿಕ್ಷಕರಿಗೆ ಸೂಚಿಸಲಾಗಿದೆ.

ಶಾಲಾ ಶಿಕ್ಷಣ ಇಲಾಖೆಯು ಸಿದ್ಧತೆ ನಡೆಸಿದೆ. ಮೇ 29 ಶಾಲೆಗಳ ಪ್ರಾರಂಭಕ್ಕೆ ಪೂರ್ವತಯಾರಿ ನಡೆಸಲಾಗುತ್ತದೆ. ಮೇ 30 ರಂದು ಪೂರ್ವಭಾವಿ ಸಭೆಗಳನ್ನು ನಡೆಸಲಾಗುತ್ತದೆ. ಮೇ 31ರ ಬುಧವಾರದಿಂದ ತರಗತಿಗಳನ್ನು ಆರಂಭಿಸಲಾಗುತ್ತದೆ.

ಕಳೆದ ಮಾರ್ಚ್ 30 ರಂದು ಶಾಲಾ ಶಿಕ್ಷಣ ಇಲಾಖೆಯು ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದ್ದು ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಏಕರೂಪದ ಮಾರ್ಗಸೂಚಿ ಅನುಷ್ಠಾನಗೊಳಿಸುವಂತೆ ಆಯುಕ್ತರು ಸೂಚನೆ ನೀಡಿದ್ದರು.

2023-24 ನೇ ಸಾಲಿನ ಎರಡನೇ ಶೈಕ್ಷಣಿಕ ಅಧಿವೇಶನ ಮೇ 29ರಿಂದ ಆರಂಭಗೊಂಡು ಅಕ್ಟೋಬರ್‌ 7ರವರೆಗೆ ನಡೆಯಲಿದೆ. ಎರಡನೇ ಶೈಕ್ಷಣಿಕ ಅಧಿವೇಶನವು ಅಕ್ಟೋಬರ್‌ 25ರಿಂದ ಏಪ್ರಿಲ್‌ 7ರವರೆಗೆ ಇರಲಿದೆ. ದಸರಾ ರಜೆ ಅಕ್ಟೋಬರ್‌ 8ರಿಂದ 24ರವರೆಗೆ ಇರಲಿದೆ.

ಈ ನಿಟ್ಟಿನಲ್ಲಿ ಶಾಲಾ ಪ್ರಾರಂಭೋತ್ಸವ ಆಯೋಜನೆಗೆ ಇಲಾಖೆ ಸೂಚಿಸಿದೆ. ಅದೇರೀತಿ ಶಿಕ್ಷಕರಿಗೆ ಕಳೆದ ಸಾಲಿನಲ್ಲಿ ನಡೆಸಿದ ಮೌಲ್ಯಂಕನ ವಿಶ್ಲೇಷಣೆ ಪರೀಕ್ಷೆ ವರದಿ ಒದಗಿಸಲಾಗುತ್ತದೆ. ಯಾವ ವಿಷಯದಲ್ಲಿ ವಿದ್ಯಾರ್ಥಿಗಳು ಹಿಂದುಳಿದ್ದಿದ್ದಾರೆ ಎಂಬ ಮಾಹಿತಿ ನೀಡಲಾಗುತ್ತದೆ. ಅದನ್ನು ಅವಲೋಕಿಸಿ ನೈದಾನಿಕ ಪರೀಕ್ಷೆ ಹಮ್ಮಿಕೊಂಡು ಫಲಿತಾಂಶ ವಿಶ್ಲೇಷಿಸಬೇಕೆಂದು ಶಿಕ್ಷಕರಿಗೆ ಸೂಚಿಸಲಾಗಿದೆ.

Ashika S

Recent Posts

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

3 hours ago

ಅಧಿಕಾರಕ್ಕಾಗಿ ಮಾನವಿಯತೆ ಮರೆತಿದ್ದಾರೆ ಖಂಡ್ರೆ : ಭಗವಂತ ಖೂಬಾ

ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…

3 hours ago

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…

3 hours ago

ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…

4 hours ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…

4 hours ago

ಯತ್ನಾಳ್ ಬಾಯಿ, ಬೊಂಬಾಯಿ : ಸಚಿವ ಎಂ.ಬಿ‌.ಪಾಟೀಲ್ ತಿರುಗೇಟು

ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…

4 hours ago