News Karnataka Kannada
Wednesday, May 01 2024
ಬೆಂಗಳೂರು

ಬೆಂಗಳೂರು: ಹಿರಿಯ ಪತ್ರಕರ್ತರಿಗೆ ಕಾಯಕ ಪ್ರಶಸ್ತಿ ಪ್ರದಾನ

Senior journalists to be conferred with Kayaka Awards
Photo Credit : By Author

ಬೆಂಗಳೂರು: ಪತ್ರಿಕಾ ದಿನಾಚರಣೆ ಅಂಗವಾಗಿ ನಮ್ಮೂರ ಅಭಿವೃದ್ಧಿ ವಿವಿಧೋದ್ದೇಶಗಳ ಸೇವಾ ಸಂಸ್ಥೆ ನಗರದಲ್ಲಿ ಹಮ್ಮಿಕೊಂಡಿದ್ದ  ಪತ್ರಿಕಾ ದಿನಾಚರಣೆ  ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ವೆಂಕಟನಾರಾಯಣ, ವೆಂಕಟಸುಬ್ಬು ಮೋಕ್ಷಗುಂಡಂ, ಬಿ.ಕೆ. ಪ್ರಸನ್ನ ಅವರುಗಳಿಗೆ ಕಾಯಕರತ್ನ -2022 ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸೇವಾ ಸಂಸ್ಥೆಯ ವರಿಷ್ಠರಾದ ಮೌರ್ಯ ಪೂಜಾರಿ ಯಲ್ಲಪ್ಪ ಭೀಮಸೇನ್ ಅವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಿಕಾ ಕ್ಷೇತ್ರದಲ್ಲಿ ಸಾಧನೆಗೈದ ಹಿರಿಯ ಪತ್ರಕರ್ತರಾದ ವೆಂಕಟನಾರಾಯಣ, ವೆಂಕಟಸುಬ್ಬು ಮೋಕ್ಷಗುಂಡಂ, ಬಿ.ಕೆ. ಪ್ರಸನ್ನ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಸ್ವೀಕರಿಸಿದ ಹಿರಿಯಪತ್ರಕರ್ತರಾದ ಮೂವರು ಸಂಯುಕ್ತ ಕರ್ನಾಟಕ ಬೆಂಗಳೂರು – ಹುಬ್ಬಳ್ಳಿಯಲ್ಲಿ 30ಕ್ಕೂ ಹೆಚ್ಚು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ಇದರೊಂದಿಗೆ ಇತರೆ ರಾಜ್ಯಮಟ್ಟದ ಪ್ರಮುಖ ಸುದ್ದಿ, ಮಾಧ್ಯಮ ಸಂಸ್ಥೆಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದು ವಿಶೇಷವಾಗಿದೆ.

ಕಾರ್ಯಕ್ರಮದಲ್ಲಿ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಡಾ. ಟಿ.ಎಚ್. ಆಂಜನಪ್ಪ, ಐ.ಪಿ.ಎಸ್. ನಿವೃತ್ತ ಅಧಿಕಾರಿ ಡಾ. ಎಂ.ಕೆ. ನಾಗರಾಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು