ಬೆಂಗಳೂರು

ಬೆಂಗಳೂರು: ಭ್ರಷ್ಟಾಚಾರ ಆರೋಪ ಒಪ್ಪಿಕೊಂಡಂತಿದೆ, ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯಪಾಲರ ಭಾಷಣದ ಕುರಿತು ವಿಧಾನ ಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಸರ್ಕಾರ ರಾಜ್ಯಪಾಲರ ಭಾಷಣ ನೋಡಿದಲ್ಲಿ ಸರ್ಕಾರ ಅಭಿವೃದ್ಧಿ ನಡೆಸದೇ  ಕೇವಲ  ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬ ಜನರ ಆರೋಪವನ್ನು ಸಾಬೀತು ಮಾಡುವಂತಿದೆ ಎಂದು  ತಿಳಿಸಿದ್ದಾರೆ.

ನಿರುದ್ಯೋಗ, ಬೆಲೆ ಏರಿಕೆ, ಭ್ರಷ್ಟಾಚಾರ, ಸೌಹಾದದ ಸಮಸ್ಯೆ,  ಕೃಷಿ ಬಿಕ್ಕಟ್ಟು, ನೇಕಾರರ, ಸಮಸ್ಯೆಗಳು, ಮೀನುಗಾರರ ಸಮಸ್ಯೆ, ಸಣ್ಣ ಕೈಗಾರಿಕೆಗಳಿಗೆ ಒತ್ತು ನೀಡದ ಕಾರಣ ಗಂಭಿರ ಸಮಸ್ಯೆಗಳನ್ನು ಎದುರಿಸುತ್ತಿದೆ. ಸಮಸ್ಯೆ ಪರಿಹರಿಸುವುದು ಸರ್ಕಾರದ ಕರ್ತವ್ಯ. ಆದರೆ ರಾಜ್ಯಪಾಲರ 82 ಪ್ಯಾರಾಗಳ ಭಾಷಣದಲ್ಲಿ ಈ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿಲ್ಲ.

ರಾಜಸ್ತಾನ ಹೊರತುಪಡಿಸಿ ಕರ್ನಾಟಕ ಎರಡನೇ ಅತಿ ದೊಡ್ಡ ಒಣ ಭೂಮಿ ಇರುವ ರಾಜ್ಯ. ಆದರೆ  ಕೃಷ್ಣ ಮೇಲ್ದಂಡೆ ಯೋಜನೆಗೆ ಸಂಬಂಧಪಟ್ಟಂತೆ ಕರ್ನಾಟಕಕ್ಕೆ ಹಂಚಿಕೆಯಾಗಿರುವ ನೀರನ್ನು ಬಳಸಿಕೊಳ್ಳುವಲ್ಲಿ ರಾಜ್ಯ ವಿಫಲವಾಗಿದೆ. ಆದ್ದರಿಂದ ಆ ನೀರನ್ನು ತಮಗೆ ಹಂಚಿಕೆ ಮಾಡಿ ಎಂದು ತೆಲಂಗಾಣದ ಸರ್ಕಾರ,  ಕೇಂದ್ರ ಸರ್ಕಾರ ಹಾಗೂ ಸುಪ್ರೀಂಕೋರ್ಟ್‍ಗಳ ಮುಂದೆ ಹೋಗಿದೆ.  ರಾಜ್ಯದಲ್ಲಿ ಹಲವು ವರ್ಷಗಳಿಂದ ಮಹದಾಯಿ, ಮೇಕೆದಾಟು, ಭದ್ರಾ-ಕೃಷ್ಣ ಮೇಲ್ದಂಡೆ, ತುಮಗಭದ್ರಾ ಅಣೆಕಟ್ಟುಗಳ ನಿರ್ಮಾಣ ಮುಂತಾದ ಅನೇಕ ನೀರಾವರಿ ಸಮಸ್ಯೆಗಳನ್ನು ಎದುರಿಸುತ್ತಿದೆ. ಆದರೆ, ಸರ್ಕಾರ ನೀರಾವರಿ ವಿಚಾರದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ  ಎನ್ನುವುದನ್ನುಭಾಷಣದಲ್ಲಿ ಒಪ್ಪಿಕೊಂಡಿದೆ.

ಉತ್ತರ ಕರ್ನಾಟಕದಲ್ಲಿ ಯಥೇಚ್ಛ  ಜಲ ಸಂಪನ್ಮೂಲದ ಲಭ್ಯತೆ ಇದ್ದರೂ ಕೊಪ್ಪಳ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಿಗೆ ಸಮರ್ಪಕವಾಗಿ ನೀರಾವರಿ ಸೌಲಭ್ಯವನ್ನು ಒದಗಿಸಲು ಈ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯಪಾಲರ ಭಾಷಣದಲ್ಲಿ ನೀರಾವರಿಯ ಕುರಿತು ಅಥವಾ ಈ ಯೋಜನೆಗಳ ಕುರಿತು ಯಾವುದೇ ಸ್ಪಷ್ಟ ಪ್ರಸ್ತಾಪವಿಲ್ಲ.

ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಎರಡೂ ವಲಯಗಳು ಸೇರಿದಂತೆ 2 ಕೋಟಿಗೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ನಯಾಪೈಸೆಯ ಕಾರ್ಯಕ್ರಮಗಳನ್ನು ರೂಪಿಸಿಲ್ಲ ಎನ್ನುವುದನ್ನು ಒಪ್ಪಿಕೊಂಡಿದೆ.

88 ಲಕ್ಷ ಕೃಷಿ ಕುಟುಂಬಗಳಿವೆ. ಕೃಷಿಯನ್ನು ಲಾಭದಾಯಕ ಚಟುವಟಿಕೆಯನ್ನಾಗಿಸಲು ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ.   ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಸೇರಿದಂತೆ ಕರ್ನಾಟಕದ ಅಭಿವೃದ್ಧಿಗೆ ರಾಜ್ಯಪಾಲರ ಭಾಷಣದಲ್ಲಿ ಯಾವುದೇ ಉಲ್ಲೇಖಗಳಿಲ್ಲ.  ಭ್ರಷ್ಟಾಚಾರ ಸಮಸ್ಯೆಯನ್ನು ಹೋಗಲಾಡಿಸಲು ಸರ್ಕಾರ ಏನು ಕ್ರಮ ಕೈಗೊಂಡಿದೆ ಎನ್ನುವ ಬಗ್ಗೆ ಪ್ರಸ್ತಾಪವಿಲ್ಲ.  ಅಂತೆಯೇ ರಾಜ್ಯದ ಆದಾಯಕ್ಕೆ ಬೆಂಗಳೂರಿನ ಕೊಡುಗೆ ಶೇ70 ಕ್ಕಿಂತ ಹೆಚ್ಚು. ಆದರೆ, ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಪಟ್ಟಂತೆ ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟವಾದ ಯಾವುದೇ ಕಾರ್ಯಕ್ರಮಗಳು ಇಲ್ಲ.  ತುಮಕೂರು ರಸ್ತೆಯಿಂದ ಹೊಸೂರುವರೆಗಿನ 100 ಮೀಟರ್ ಅಗಲದ ಫೆರಿಫೆರಲ್ ರಸ್ತೆ ಮತ್ತು ಸಬ್ ಅರ್ಬನ್ ರೈಲು ಯೋಜನೆಯ ಮಾತನ್ನು ಕಳೆದ ನಾಲ್ಕು ವರ್ಷಗಳಿಂದ ಬಿಜೆಪಿಯವರು ಹೇಳುತ್ತಿದ್ದಾರೆ. ಈ ಬಗ್ಗೆ ಸ್ಪಷ್ಟ ಯೋಜನೆಯಿಲ್ಲದೆ ರಾಜ್ಯಪಾಲರಿಂದ ಸುಳ್ಳು ಹೇಳಿಸಿದ್ದಾರೆ.  ಕರಾವಳಿ ಮತ್ತು ಮಲೆನಾಡಿನ ರೈತರು ಹಾಗೂ ರಾಗಿ ಭತ್ತ, ಜೋಳ, ತೊಗರಿ ಮುಂತಾದವುಗಳನ್ನು ಬೆಳೆಯುವ ಉತ್ತರ ಕರ್ನಾಟಕ ಮತ್ತು ಬಯಲು ಸೀಮೆಯ ರೈತರಿಬ್ಬರೂ ಸಂಕಷ್ಟದಲ್ಲಿದ್ದಾರೆ. ಈ ಸಂಕಷ್ಟಗಳನ್ನು ಹೋಗಲಾಡಿಸುವ ಕುರಿತು ಯಾವುದೇ ಕಾರ್ಯಕ್ರಮಗಳನ್ನು ಕೊಟ್ಟಿಲ್ಲ.  ಬೆಂಗಳೂರಿನ ಮೆಟ್ರೋ ನಮ್ಮ ಸರ್ಕಾರದ ಸಾಧನೆ. ರಾಜ್ಯದಲ್ಲಿ ಪ್ರಾರಂಭವಾದ ಜವಳಿ ಪಾರ್ಕ್‍ಗಳು, ವಿಮಾನ ನಿಲ್ದಾಣಗಳು ನಮ್ಮ ಕೊಡುಗೆ. ನಮ್ಮ ಸಾಧನೆಗಳನ್ನು ಬಿಜೆಪಿ ಸರ್ಕಾರ ತಮ್ಮ ಸಾಧನೆಗಳು ಎಂದು ಹೇಳಿಕೊಳ್ಳಲು ಹೊರಟಿರುವುದು ನಾಚಿಕೆಗೇಡು.

ಒಟ್ಟಾರೆ ರಾಜ್ಯಪಾಲರ ಭಾಷಣ ತೌಡು ಕುಟ್ಟಿದಂತೆ ಕಾಣಿಸುತ್ತಿದೆ. ಬತ್ತ ಕುಟ್ಟಿದರೆ ಅಕ್ಕಿ ಬರುತ್ತದೆ. ತೌಡು ಕುಟ್ಟಿದರೆ ಬರಿ ಉಬ್ಬಲು ಬರುತ್ತದೆ. ಸರ್ಕಾರ ಯಾವ ಸಾಧನೆಯನ್ನೂ ಮಾಡದಿರುವುದನ್ನು ಸ್ವತಃ ಒಪ್ಪಿಕೊಂಡಿರುವುದರಿಂದ ಸರ್ಕಾರವು ತಯಾರು ಮಾಡಿದ ಈ ಭಾಷಣವನ್ನು ನಾನು ಭೂಸಾ ಅಥವಾ ತೌಡು ಕುಟ್ಟುವ ಭಾಷಣ ಎಂದು ಕರೆಯ ಬಯಸುತ್ತೇನೆ. ಒಟ್ಟಾರೆ, ಬಿಜೆಪಿ ಸರ್ಕಾರವು ನಾಲ್ಕು ವರ್ಷಗಳಲ್ಲಿಭ್ರಷ್ಟಾಚಾರವನ್ನು ಬಿಟ್ಟು, ರಾಜ್ಯದ ಧರ್ಮ-ಜಾತಿ ಸಂಘರ್ಷ ಹೆಚ್ಚಿಸಿದ್ದನ್ನು ಬಿಟ್ಟು ಬೇರೆ ಏನು ಮಾಡಿಲ್ಲ ಎಂಬುದನ್ನು ರಾಜ್ಯ ಪಾಲರ ಭಾಷಣ ಮೂಲಕ ಸರ್ಕಾರ ಒಪ್ಪಿಕೊಂಡಿದೆ ಎಂದು ಸಿದ್ದರಾಮಯ್ಯ  ಪ್ರತಿಕ್ರಿಯೆ ನೀಡಿದ್ದಾರೆ.

Ashika S

Recent Posts

ಉದಯ ಟಿವಿಯಲ್ಲಿ‘ಶ್ರೀಮದ್ ರಾಮಾಯಣ’ ಧಾರಾವಾಹಿ ನೋಡಿ ಬಹುಮಾನ ಗೆಲ್ಲಿ

ಈಗ ‘ಉದಯ’ ವಾಹಿನಿಯು ಒಂದು ಹೊಸ ಧಾರಾವಾಹಿಯನ್ನು ಪ್ರೇಕ್ಷಕರ ಎದುರು ತರುತ್ತಿದೆ. ‘ಶ್ರೀಮದ್ ರಾಮಾಯಣʼ ಸೀರಿಯಲ್ ಪ್ರಸಾರಕ್ಕೆ ಸಜ್ಜಾಗಿದೆ. ಮೇ…

6 mins ago

ಲಾರಿಗೆ ಬಸ್‌ ಡಿಕ್ಕಿ : 4 ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಓವರ್​ಟೇಕ್​ ಮಾಡುವ ಭರದಲ್ಲಿ ಪ್ರಯಾಣಿಕರಿದ್ದ ಬಸ್​ವೊಂದು​ ಲಾರಿಗೆ ಡಿಕ್ಕಿ ಹೊಡೆದ ಘಟನೆ ಚೆನ್ನೈ-ತಿರುಚಿ ಹೆದ್ದಾರಿಯಲ್ಲಿ ಇಂದು ನಡೆದಿದೆ.ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.…

27 mins ago

ಸ್ಲೊವಾಕಿಯಾ ಪ್ರಧಾನ ಮಂತ್ರಿಗೆ ಗುಂಡೇಟು : ಶಂಕಿತ ಅರೆಸ್ಟ್

ಅಮೆರಿಕ ವಿರೋಧಿ ನಿಲುವುಗಳನ್ನು ಹೊಂದಿರುವ ತೀವ್ರ ಎಡಪಂಥೀಯ ನಾಯಕ, ಸ್ಲೊವಾಕಿಯಾ ಪ್ರಧಾನ ಮಂತ್ರಿ ರಾಬರ್ಟ್ ಫಿಕೊ ಹತ್ಯೆ ಯತ್ನಬುಧವಾರ ನಡೆದಿದೆ.…

47 mins ago

49 ಅಭ್ಯರ್ಥಿಗಳಿಂದ ಉಮೇದುವಾರಿಕೆ : ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನ.…

1 hour ago

ವೈದ್ಯರ ಎಡವಟ್ಟಿಗೆ ಆಸ್ಪತ್ರೆಯಲ್ಲಿ ರೋಗಿ ಸಾವು

ವೈದ್ಯರ ಎಡವಟ್ಟಿಗೆ ಆಸ್ಪತ್ರೆಯಲ್ಲಿ ರೋಗಿ ಸಾವನಪ್ಪಿರುವ ಘಟನೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.ಕೃಷ್ಣಪ್ಪ ಗೌಡ(47) ಮೃತ ವ್ಯಕ್ತಿ. ಬಂಟ್ವಾಳ ತಾಲೂಕಿನ…

1 hour ago

ನೀವು ತಡರಾತ್ರಿ ವರೆಗೆ ಎಚ್ಚರ ಇರುತ್ತೀರಾ? ಇದರ ಸಮಸ್ಯೆಗಳೇನು ಗೊತ್ತೇ?

ತಡರಾತ್ರಿ ಇಲ್ಲ ಮುಂಜಾವರೆಗೂ ಕೆಲವರು ನಿದ್ದೆ ಗೆಡುತ್ತಾರೆ ಇದೊಂದು ಈಗಿನ ಜಯಮಾನದ ಸಾಮಾನ್ಯ ಅಭ್ಯಾಸವಾಗಿದೆ.ಕೆಲಸದ ಒತ್ತಡ, ಕಚೇರಿಯ ಕೆಲಸಗಳು, ಸಾಮಾಜಿಕ…

2 hours ago