News Karnataka Kannada
Tuesday, April 30 2024
ಬೆಂಗಳೂರು

 ಬೆಂಗಳೂರು: ಸರ್ಕಾರ ಬಂಡವಾಳ ಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ

This government is working on behalf of the capitalists.
Photo Credit : Facebook

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಅದಾನಿ ಸಮೂಹದ ವಿಚಾರವಾಗಿ ಬಹಳ ಚರ್ಚೆ ಆಗುತ್ತಿದೆ. ಸಂಸತ್ತಿನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಸರ್ಕಾರವನ್ನು ಪ್ರಶ್ನೆ ಮಾಡುತ್ತಿದ್ದು, ಈ ವಿಚಾರಗಳನ್ನು ಸಂಸತ್ತಿನಲ್ಲಿ ಕಡತದಿಂದ ತೆಗೆದುಹಾಕಲಾಗುತ್ತಿದೆ. ಬಿಜೆಪಿಗೆ ಬಹುಮತ ಇದೆ ಎಂಬ ಕಾರಣಕ್ಕೆ ಸದನದ ಸದಸ್ಯರ ವಿಚಾರವನ್ನು ಕಡತದಿಂದ ತೆಗೆದುಹಾಕುವುದು ಸರಿಯಲ್ಲ. ಪ್ರಧಾನಮಂತ್ರಿಗಳು ನಮ್ಮ ನಾಯಕರ ಪ್ರಶ್ನೆಗಳಿಗೆ ಒಂದಕ್ಕೂ ಉತ್ತರಿಸಲು ಆಗಲಿಲ್ಲ.

ಜಂಟಿ ಪತ್ರಿಕಾಗೋಷ್ಠಿಯಲ್ಲಿ ರಾಜಸ್ಥಾನದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಮಾತಾನಾಡಿದರು.

ಈ ಸರ್ಕಾರ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಾ, ಸಾರ್ವಜನಿಕ ಉದ್ದಿಮೆಗಳನ್ನು ಕಿಡಿಮೆ ಮೊತ್ತಕ್ಕೆ ಉದ್ಯಮಿಗಳಿಗೆ ಮಾರಾಟ ಮಾಡುತ್ತಿದ್ದಾರೆ. ಸೆಬಿ, ಆರ್ ಬಿಐ ಸೇರಿದಂತೆ ಎಲ್ಲ ಸಂಸ್ಥೆಗಳು ಮೌನವಾಗುಳಿದಿವೆ. ಹೀಗಾಗಿ ಈ ವಿಚಾರವಾಗಿ ಪ್ರಶ್ನೆ ಮಾಡುವುದು ಕಾಂಗ್ರೆಸ್ ಪಕ್ಷದ ಕರ್ತವ್ಯ. ಸರ್ಕಾರ ಈ ವಿಚಾರದಲ್ಲಿ ಯಾವುದೇ ವಿಚಾರ ಮುಚ್ಚಿಡುವ ಉದ್ದೇಶವಿಲ್ಲವಾದರೆ ಜಂಟಿ ಸದನ ಸಮಿತಿ ರಚನೆಗೆ ಯಾಕೆ ಹಿಂದೇಟಾಕ್ಕುತ್ತಿದೆ? ಲೋಕಸಭೆಯಲ್ಲಿ ಬಿಜೆಪಿ ಬಹುಮತ ಹೊಂದಿರುವುದರಿಂದ ಸಮಿತಿಯಲ್ಲಿ ಬಿಜೆಪಿ ಸದಸ್ಯರೇ ಹೆಚ್ಚಾಗಿ ಇರುತ್ತಾರೆ. ಆದರೂ ಸರ್ಕಾರ ಮಾತ್ರ ಜಂಟಿ ಸದನ ಸಮಿತಿ ರಚಿಸಲು ಹಿಂಜರಿಯುತ್ತಿರುವುದೇಕೆ?

ಬೇರೆ ವಿಚಾರದಲ್ಲಿ ವಿವಿಧ ತನಿಖಾ ಸಂಸ್ಥೆಗಳು ತನಿಖೆ ನಡೆಯಲಿ ಎಂದು ಹೇಳುತ್ತಾರೆ. ಈ ವಿಚಾರದಲ್ಲೂ ನಾವು ಅದನ್ನೇ ಕೇಳುತ್ತಿದ್ದೇವೆ. ಆದರೂ ಸರ್ಕಾರ ಮಾತ್ರ ಮೀನಾಮೇಷ ಏಣಿಸುತ್ತಿದೆ. ಆರ್ಥಿಕ ಸಚಿವಾಲಯ, ಪ್ರಧಾನಿಗಳು ಸೇರಿದಂತೆ ಬಿಜೆಪಿಯ ಯಾವೊಬ್ಬ ನಾಯಕ ಸತ್ಯಾಂಶದ ಬಗ್ಗೆ ಮಾತನಾಡುತ್ತಿಲ್ಲ. ದೇಶದ ಕೋಟ್ಯಂತರ ಜನರ ಉಳಿತಾಯದ ಹಣವನ್ನು ಸಾರ್ವಜನಿಕ ಉದ್ಯಮದ ಮೇಲೆ ಹಾಕಿದ್ದು. ಆ ಹಣವನ್ನು ರಕ್ಷಣೆ ಮಾಡುವುದು ಅವರ ಹಿತ ಕಾಯುವುದು ಸರ್ಕಾರದ ಜವಾಬ್ದಾರಿ. ಆದರೆ ಈ ಸರ್ಕಾರ ಅದಾನಿ ಮೂಹದ ವಿಚಾರದಲ್ಲಿ ಯಾವುದೇ ತನಿಖೆ ನಡೆಸಲು ಮುಂದೆ ಬರುತ್ತಿಲ್ಲ. ಬಿಜೆಪಿ ನಾಯಕರು ನಾಖಾವೂಂಗಾ ನಾ ಖಾನೇದೂಂಗ ಎನ್ನುತ್ತಿದ್ದರು. ಆದರೆ ಈಗ ದೇಶದ ಜನರ ಹಣ ಲೂಟಿ ಮಾಡುತ್ತಿರುವಾಗ ಇವರು ಕಣ್ಣುಮುಚ್ಚಿಕೊಂಡು ಕೂತಿದ್ದಾರೆ. ಇದರ ಸತ್ಯಾಂಶ ತಿಳಿಯಬೇಕಾದರೆ ಜಂಟಿ ಸದನ ಸಮಿತಿ ರಚನೆ ಆಗಬೇಕಿದೆ.

ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ದಮನ ಮಾಡಲಾಗುತ್ತಿದೆ. ಸಂಸತ್ತಿನಲ್ಲಿ ವಿರೋಧ ಪಕ್ಷಗಳ ನಾಯಕರ ಹೇಳಿಕೆಯನ್ನು ದಾಖಲೆಗಳಿಂದ ತೆಗೆಯಲಾಗುತ್ತಿದೆ. ಪತ್ರಿಕಾಗೋಷ್ಠಿ ಮಾಡುತ್ತಿಲ್ಲ, ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡುತ್ತಿಲ್ಲ, ಜಂಟಿ ಸದನ ಸಮಿತಿ ರಚನೆ ಮಾಡುತ್ತಿಲ್ಲ. ಆ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರಲಾಗುತ್ತಿದೆ. ಬಿಜೆಪಿ ಸರ್ಕಾರ ದೇಶದ ಜನರ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಈ ವಿಚಾರದಲ್ಲಿ ಪಾರದರ್ಶಕತೆ ಕಾಪಾಡಬೇಕು ಎಂದು ಆಗ್ರಹಿಸುತ್ತೇವೆ.

ಇನ್ನು ಪ್ರಧಾನಿ ಮೋದಿ ಅವರು ಸಂಸತ್ತಿನಲ್ಲಿ ಮಾತನಾಡುತ್ತಾ 2004ರಿಂದ 2014ರವರೆಗಿನ ಸಮಯವನ್ನು ಕಳೆದುಹೋದ ದಶಕ ಎಂದು ಕರೆದಿದ್ದಾರೆ. ಆದರೆ ಈ ಅವಧಿಯಲ್ಲಿ ದೇಶದ ಜಿಡಿಪಿ ಅತ್ಯುತ್ತಮವಾಗಿ ಏರಿಕೆಯಾಗಿತ್ತು. ಈ ಸಮಯದಲ್ಲಿ 140 ಮಿಲಿಯನ್ ಜನರನ್ನು ಬಡತನ ರೇಖೆಯಿಂದ ಮೇಲೆತ್ತಲಾಗಿತ್ತು. ದೇಶದ ಆರ್ಥಿಕತೆ ಬೆಳೆದು ವಿದೇಶಗಳಲ್ಲಿದ್ದ ವಿದ್ಯಾವಂತರು ಭಾರತಕ್ಕೆ ಆಗಮಿಸುತ್ತಿದ್ದರು. ಆದರೆ ಈಗ ಭಾರತದಿಂದ ಮತ್ತೆ ವಿದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಇಂದು ಜಾಗತಿಕ ಮಟ್ಟದಲ್ಲಿ ಭಾರತ ಪಡೆದಿರುವ ಉನ್ನತ ಸ್ಥಾನಕ್ಕೆ ಆ 10 ವರ್ಷಗಳ ಆಡಳಿತ ಕಾರಣ. ಆದರೆ ಅದರ ಫಲವನ್ನು ಈ ಸರ್ಕಾರ ಪಡೆಯುತ್ತಿದೆ.

ಯುಪಿಎ ಅವಧಿಯಲ್ಲಿ ಯುಎಸ್ ಅಣು ಒಪ್ಪಂದ, ಜಿಎಸ್ಟಿ, ಫಲಾನುಭವಿಗಳಿಗೆ ನೇರ ಹಣ, ಚಿಲ್ಲರೆ ವ್ಯಾಪಾರದಲ್ಲಿ ವಿದೇಶಿ ಬಂಡವಾಳ ಹೂಡಿಕೆಯಂತ ನಿರ್ಧಾರಗಳನ್ನು ಬಿಜೆಪಿ ವಿರೋಧಿಸಿ, ಈಗ ಅವರು ಅಧಿಕಾರಕ್ಕೆ ಬಂದ ನಂತರ ಅದನ್ನೇ ಮಾಡುತ್ತಿದ್ದಾರೆ. ಕಳೆದ 8 ವರ್ಷಗಳಿಂದ ಬಿಜೆಪಿ ಸರ್ಕಾರ ಪ್ರತಿ 2 ತಿಂಗಳಿಗೊಮ್ಮೆ ಘೋಷವಾಕ್ಯಗಳನ್ನು ಮಾತ್ರ ನೀಡುತ್ತಾ ಬಂದಿದೆ. ಈ ಸರ್ಕಾರದ ಅವಧಿಯಲ್ಲಿ ಐದು ದಶಕಗಳಲ್ಲೇ ಅತಿ ಹೆಚ್ಚು ನಿರುದ್ಯೋಗ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹೆಚ್ಚಾಗಿದೆ.

ಹೀಗಾಗಿ ಮುಂಬರುವ ಕರ್ನಾಟಕ ಹಾಗೂ ಇತರ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಬೆಂಬಲ ನೀಡುವ ವಿಶ್ವಾಸವಿದೆ. ಅದರಲ್ಲೂ ಕರ್ನಾಟಕದ ಜನ ಕೆಲಸ ಮಾಡುವ ಸರ್ಕಾರವನ್ನು ನಿರೀಕ್ಷಿಸುತ್ತಿದ್ದಾರೆ. ಅವರಿಗೆ ಉದ್ಯೋಗ ಬೇಕು. ಹೀಗಾಗಿ ಇಲ್ಲಿ ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜ್ಯದಲ್ಲಿ ಕಾಂಗ್ರೆಸ್ ಗೆ ಜನ ಬೆಂಬಲ ಸಿಗಲಿದೆ. ಕಾಂಗ್ರೆಸ್ ಅತಿ ಹೆಚ್ಚು ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ.

ಇಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆಯಾಗಿದೆ. ಇದು ಬಿಜೆಪಿ ಸರ್ಕಾರದ ವಿದಾಯದ ಬಜೆಟ್ ಆಗಿದೆ. ಕರ್ನಾಟಕ ರಾಜ್ಯ ಸರ್ಕಾರ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ದುರಾಡಳಿತದ ಮೂಲಕ 40% ಕಮಿಷನ್ ಸರ್ಕಾರ ಎಂದು ರಾಷ್ಟ್ರ ಮಟ್ಟದಲ್ಲಿ ಕುಖ್ಯಾತಿ ಪಡೆದಿದೆ. ಸರ್ಕಾರಿ ಹುದ್ದೆಗಳು ಮಾರಾಟವಾಗುತ್ತಿದೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು