ಬೆಂಗಳೂರು: ಉಚಿತ ಬಸ್‌ ಪ್ರಯಾಣಕ್ಕೂ ಬೇಕು ಟಿಕೆಟ್‌ – ಇಲ್ಲಿದೆ ನೋಡಿ ಇಲ್ಲಿದೆ ಡಿಟೇಲ್ಸ್‌

ಬೆಂಗಳೂರು: ಕಾಂಗ್ರೆಸ್ ಘೋಷಿಸಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೂ ಟಿಕೆಟ್‌ ಪಡೆದುಕೊಳ್ಳಬೇಕಿದೆ. ಮಹಿಳೆಯರು ರಾಜ್ಯದ್ಯಂತ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಆದರೆ, ಸರ್ಕಾರ ಕೆಲವು ಷರತ್ತುಗಳನ್ನು ಹಾಕಿದೆ.

ಬಸ್ ಸೇವೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿರುತ್ತದೆ. ರಾಜ್ಯದ ಒಳಗೆ ಮಾತ್ರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಎಕ್ಸ್‌ಪ್ರೆಸ್ ಬಸ್​ನಲ್ಲಿ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಬಿಎಂಟಿಸಿ ಮತ್ತು ಕೆಎಸ್​ಆರ್​​ಟಿಸಿ ಬಸ್​ನಲ್ಲಿ ಅವಕಾಶ ಇದೆ. ಎಸಿ ಮತ್ತು ಐಷಾರಾಮಿ ಬಸ್​ಗಳಲ್ಲಿ ಉಚಿತ ಪ್ರಯಾಣವಿಲ್ಲ. ರಾಜಹಂಸ ಬಸ್​ನಲ್ಲಿಯೂ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಇರುವುದಿಲ್ಲ. ಅಂತಾರಾಜ್ಯ ಪ್ರಯಾಣಕ್ಕೆ ಉಚಿತ ಸೌಲಭ್ಯ ಇರುವುದಿಲ್ಲ. ಉಚಿತ ಪ್ರಯಾಣದ ವೇಳೆ ಮಹಿಳೆರಿಗೆ ಟಿಕೆಟ್​ ಕೊಡುತ್ತಾರಾ? ಅಥವಾ ಯಾವುದಾದರೂ ದಾಖಲೆ ತೆಗೆದುಕೊಂಡು ಹೋಗಬೇಕಾ ಎಂಬ ಗೊಂದಲ ಮಹಿಳೆಯರಲ್ಲಿದೆ. ಆದರೆ, ಆ ಗೊಂದಲಕ್ಕೆ ಈಗ ತೆರೆಬಿದ್ದಿದೆ.

ಉಚಿತ ಪ್ರಯಾಣ ಹಿನ್ನೆಲೆಯಲ್ಲಿ ಬಸ್​ನಲ್ಲಿ ಟಿಕೆಟ್ ಪಡೆಯುವ ಗೋಜಿಲ್ಲ ಅಂತ ಮಹಿಳೆಯರು ಅಂದುಕೊಳ್ಳಬೇಡಿ. ಏಕೆಂದರೆ, ಕಂಡಕ್ಟರ್​ ಮಹಿಳೆಯರಿಗೂ ಟಿಕೆಟ್ ಕೊಡುತ್ತಾರೆ.

ಟಿಕೆಟ್​ ಮೇಲೆ “ಮಹಿಳಾ ಪ್ರಯಾಣಿಕರ ಉಚಿತ ಚೀಟಿ ಶಕ್ತಿ ಯೋಜನೆ” ಎಂದು ಬರೆದಿರುತ್ತಾರೆ ಮತ್ತು ಟಿಕೆಟ್​ನಲ್ಲಿ ಯಾವುದೇ ಬೆಲೆ ನಮೂದಾಗುವುದಿಲ್ಲ. ಮಾಮೂಲಿಯಂತೆ ಕಂಡಕ್ಟರ್​ ಬಳಿ ಟಿಕೆಟ್​ ಪಡೆದುಕೊಳ್ಳಬೇಕು. ಆದರೆ, ಬದಲಾವಣೆ ಏನೆಂದರೆ, ಹಣ ಕೊಡುವಂತಿಲ್ಲ.

Ashika S

Recent Posts

ಬಿಜೆಪಿ ಮತ್ತೆ ಗೆದ್ದರೆ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್‌

ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ…

20 seconds ago

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

24 mins ago

ಹೆಚ್ಚಿನ ಫೀಸ್ ತೆಗೆದುಕೊಂಡರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮ : ಬಂಗಾರಪ್ಪ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ

32 mins ago

ವಿದ್ಯಾರ್ಥಿನಿಯ ಹತ್ಯೆ ಪ್ರಕರಣ: ಮರದ ಮೇಲೆ ಬಾಲಕಿಯ ರುಂಡ ಪತ್ತೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಬಾಲಕಿ ರುಂಡ ಪತ್ತೆಯಾಗಿದೆ

38 mins ago

ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ  ಸೆಕೆಂಡ್​ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…

55 mins ago

ಹೈಕೋರ್ಟ್ ಅಡ್ವೋಕೇಟ್ ಚೈತ್ರಾ ಬಿ.ಗೌಡ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

55 mins ago