ಬೆಂಗಳೂರು

ಅತ್ಯುತ್ತಮ ‘ಆರ್‌ಆರ್‌ಆರ್’ ನಗರವಾಗಿ ಬಿಬಿಎಂಪಿ ಆಯ್ಕೆ

ಬೆಂಗಳೂರು: ನಗರರಾಭಿವೃದ್ಧಿ ಇಲಾಖೆಯ ಪೌರಾಡಳಿತ ನಿರ್ದೇಶನಾಲಯದಿಂದ ನಡೆಸಿರುವ ನನ್ನ ಜೀವನ, ನನ್ನ ಸ್ವಚ್ಛ ನಗರ ಅಭಿಯಾನದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ಕರ್ನಾಟಕದಲ್ಲಿ ‘ಅತ್ಯುತ್ತಮ ಆರ್‌ಆರ್‌ಆರ್ (Reduce, Reuse and Recycle-RRR) ನಗರವಾಗಿ ಆಯ್ಕೆ ಆಗಿದೆ.

ಈ ಮೂಲಕ ಬೆಂಗಳೂರು ಹೊಸ ಗೌರವಕ್ಕೆ ಪಾತ್ರವಾಗಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ‘ನನ್ನ ಜೀವನ, ನನ್ನ ಸ್ವಚ್ಛ ನಗರ’ ಎಂಬ ದ್ಯೇಯೆಯೊಂದಿಗೆ ಮೇ 15 ರಿಂದ ಪರಿಸರ ದಿನವಾದ ಜೂನ್ 5 ರವರೆಗೆ ದೊಡ್ಡ ಪ್ರಮಾಣದ ಮತ್ತು ಉನ್ನತ-ಪ್ರಭಾವದ ರಾಷ್ಟ್ರೀಯ ಅಭಿಯಾನವನ್ನು ಪ್ರಾರಂಭಿಸಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ತನ್ನ ವ್ಯಾಪ್ತಿಯ 49 ವಾರ್ಡ್ ಗಳಲ್ಲಿ ಆರ್.ಆರ್.ಆರ್ ಕೇಂದ್ರಗಳನ್ನು ತೆರೆದಿದೆ. ಅದರಲ್ಲಿ ಮನೆಗಳಲ್ಲಿ ಬಳಕೆಯಾಗದ ಪುಸ್ತಕಗಳು, ಆಟಿಕೆಗಳು, ಕಬ್ಬಿಣದ ಉತ್ಪನ್ನ ಹಾಗೂ ಪ್ಲಾಸ್ಟಿಕ್ ಉತ್ಪನ್ನಗಳನ್ನು ಕೇಂದ್ರಗಳಲ್ಲಿ ನೀಡಿದರೆ ಅದನ್ನು ಪುನರ್ ಬಳಕೆ ಮಾಡುವ ಜೊತೆಗೆ ನಗರವನ್ನು ಸ್ವಚ್ಛ ನಗರವನ್ನಾಗಿಸುವ ಪ್ರಮುಖ ಉದ್ದೇಶ ಹೊಂದಲಾಗಿದೆ.

ನನ್ನ ಜೀವನ, ನನ್ನ ಸ್ವಚ್ಛ ನಗರ ಅಭಿಯಾನದಲ್ಲಿ ವಿಭಿನ್ನ ಆಯ್ಕೆ ಮಾನದಂಡಗಳ ಆಧಾರದ ಮೇಲೆ ರಾಜ್ಯವು ಬೆಂಗಳೂರು ನಗರವನ್ನು ಕರ್ನಾಟಕ ರಾಜ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಆರ್‌ಆರ್‌ಆರ್ ನಗರಗಳಲ್ಲಿ ಒಂದಾಗಿ ಆಯ್ಕೆ ಮಾಡಿದೆ.

ಬಿಬಿಎಂಪಿಯು ‘ಅತ್ಯುತ್ತಮ ಆರ್‌ಆರ್‌ಆರ್ ನಗರ’ವಾಗಿ ಆಯ್ಕೆಯಾಗಿರುವುದಕ್ಕೆ ಆಡಳಿತಗಾರರಾದ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಘನ ತ್ಯಾಜ್ಯ ವಿಭಾಗದ ಅಧಿಕಾರಿ/ಸಿಬ್ಬಂದಿಗಳಿಗೆ ಅಭಿನಂದನೆ ತಿಳಿಸಿದರು.

Ashitha S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

7 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

8 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

8 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

8 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

8 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

9 hours ago