ಬೆಂಗಳೂರು: ಒಂದು ಕಾಲದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಆಪ್ತರಾಗಿದ್ದ ಎನ್ ಆರ್ ಸಂತೋಷ್ ಅರಸಿಕೆರೆಯಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈತಪ್ಪಿದ ಕಾರಣ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿಯಿಂದ ಜಿವಿಟಿ ಬಸವರಾಜ್ ಗೆ ಟಿಕೆಟ್ ನೀಡಲಾಗಿದ್ದರೆ, ಜೆಡಿಎ ನಾಯಕ ಹೆಚ್ ಡಿ ರೇವಣ್ಣ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಎನ್ ಆರ್ ಸಂತೋಷ್ ಅವರೊಂದಿಗೆ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಜೆಡಿಎಸ್ ಮೂಲಗಳ ಪ್ರಕಾರ, ಎನ್ ಆರ್ ಸಂತೋಷ್ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರಿಗೆ ಕರೆ ಮಾಡಿ ಅರಸಿಕೆರೆ ಟಿಕೆಟ್ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ನಡುವೆ ಎನ್ ಆರ್ ಸಂತೋಷ್ ಬೆಂಬಲಿಗರು ಬೆಂಗಳೂರಿನಲ್ಲಿರುವ ದೇವೇಗೌಡ ನಿವಾಸಕ್ಕೆ ತೆರಳಿ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದಾರೆ.