ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ಹೈಕೋರ್ಟ್ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ.
Ad
ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಪೊಲೀಸರ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಅವರು ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ.
Ad
ಸಂತ್ರಸ್ತೆಗೆ ಊಟ ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನು ಒಪ್ಪಲಾಗುವುದಿಲ್ಲ. ಅಕ್ಕ (ಭವಾನಿ ರೇವಣ್ಣ) ಬಟ್ಟೆ ಊಟ ಕಳುಹಿಸಿದ್ದರೆಂದು ಸಂತ್ರಸ್ತೆ ಹೇಳಿಕೆಯಿದೆ ಎಂದು ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಹೇಳಿತು.
Ad
Ad