ಬೆಂಗಳೂರು: ಮೈಸೂರಿನಲ್ಲಿ ದಾಖಲಾದ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ  ಶಾಸಕ ಎಚ್‌ಡಿ ರೇವಣ್ಣ ಅವರ ಪತ್ನಿ ಭವಾನಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಹೈಕೋರ್ಟ್ ನೀಡಿದೆ. ಹೈಕೋರ್ಟ್ ಏಕ ಸದ್ಯಸ ಪೀಠ ಈ ಆದೇಶವನ್ನು ನೀಡಿದೆ.

ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್​​ ಠಾಣೆಯಲ್ಲಿ ಐಪಿಸಿ ವಿವಿಧ ಸೆಕ್ಷನ್​ಗಳ ಅಡಿ ಎಫ್‌ಐಆರ್ ದಾಖಲಿಸಲಾಗಿದೆ. ಇದರಲ್ಲಿ ಭವಾನಿ ಪತಿ, ಜೆಡಿಎಸ್​ ಶಾಸಕ ಹೆಚ್.ಡಿ. ರೇವಣ್ಣ ಮೊದಲ ಆರೋಪಿ ಹಾಗೂ ಸತೀಶ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ.