Bengaluru 29°C
Ad

ಭವಾನಿ ರೇವಣ್ಣ ಕಾರು ಚಾಲಕ ಅಜಿತ್‌ನನ್ನು ಬಂಧಿಸಿದ ವಿಶೇಷ ತನಿಖಾ ತಂಡ

ಮಹಿಳೆ ಕಿಡ್ನಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್‌ನನ್ನು ಎಸ್ಐಟಿಯವರು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದಾರೆ.

ಬೆಂಗಳೂರು: ಮಹಿಳೆ ಕಿಡ್ನಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಕಾರು ಚಾಲಕ ಅಜಿತ್‌ನನ್ನು ಎಸ್ಐಟಿಯವರು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ನೋಟಿಸ್‌ ಕೊಟ್ಟರೂ ಅಜಿತ್‌ ಕ್ಯಾರೇ ಎಂದಿರಲಿಲ್ಲ. ಹೀಗಾಗಿ ವಿಶೇಷ ತನಿಖಾ ತಂಡ  ಪೊಲೀಸರು ಹೊಳೆನರಸೀಪುರದಲ್ಲಿರುವ ಅಜಿತ್ ನಿವಾಸಕ್ಕೆ ತೆರಳಿ ಸಮನ್ಸ್ ಜಾರಿ ಮಾಡಿದ್ದರು.

ಕೆ.ಆರ್ ನಗರದ ಸಂತ್ರಸ್ತ ಮಹಿಳೆಯನ್ನು ತನ್ನದೇ ಕಾರಿನಲ್ಲಿ ಕರೆದುಕೊಂಡು ಹೋಗಿದ್ದ ಅನ್ನೋ ಮಾಹಿತಿಯ ಜೊತೆಗೆ ರೇವಣ್ಣ ನಿರೀಕ್ಷಣಾ ಜಾಮೀನು ವಿಚಾರಣೆ ದಿನ ಸಂತ್ರಸ್ತ ಮಹಿಳೆಯ ವೀಡಿಯೋ ಚಿತ್ರೀಕರಣ ಮಾಡಿದ್ದು ಇದೇ ಅಜಿತ್ ಅನ್ನೋ ಮಾಹಿತಿ ಇತ್ತು.

Ad
Ad
Nk Channel Final 21 09 2023
Ad