Bengaluru 22°C
Ad

ಪ್ರಾದೇಶಿಕ ಸೇನೆಯಲ್ಲಿ ಕಮಿಷನಡ್ ಆಫೀಸರ್ ಭವ್ಯ ನರಸಿಂಹಮೂರ್ತಿ ಆಯ್ಕೆ

ಎಐಸಿಸಿ ರಾಷ್ಟ್ರೀಯ ಸಂಯೋಜಕಿ ಭವ್ಯ ನರಸಿಂಹ ಮೂರ್ತಿ ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಕಮಿಷನಡ್ ಆಫೀಸರ್ ಆಗಿ ನಿಯೋಜನೆ ಗೊಂಡಿದ್ದಾರೆ. ಅವರು ಕಾಶ್ಮೀರದಲ್ಲಿ ಭಾರತ ಪಾಕಿಸ್ಥಾನ ಗಡಿಯ ಬಳಿಯಿರುವ ಭಾರತೀಯ ಸೇನಾ ಘಟಕದಲ್ಲಿ ತರಬೇತಿ ಪಡೆದು ಲೆಫ್ಟನಂಟ್ ಆಗಿ ನಿಯೋಜನೆಗೊಂಡಿದ್ದಾರೆ‌.

ಬೆಂಗಳೂರು: ಎಐಸಿಸಿ ರಾಷ್ಟ್ರೀಯ ಸಂಯೋಜಕಿ ಭವ್ಯ ನರಸಿಂಹ ಮೂರ್ತಿ ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಕಮಿಷನಡ್ ಆಫೀಸರ್ ಆಗಿ ನಿಯೋಜನೆ ಗೊಂಡಿದ್ದಾರೆ. ಅವರು ಕಾಶ್ಮೀರದಲ್ಲಿ ಭಾರತ ಪಾಕಿಸ್ಥಾನ ಗಡಿಯ ಬಳಿಯಿರುವ ಭಾರತೀಯ ಸೇನಾ ಘಟಕದಲ್ಲಿ ತರಬೇತಿ ಪಡೆದು ಲೆಫ್ಟನಂಟ್ ಆಗಿ ನಿಯೋಜನೆಗೊಂಡಿದ್ದಾರೆ‌.

ಪ್ರಸ್ತುತ ಪ್ರಾದೇಶಿಕ ಸೇನೆಯಲ್ಲಿರುವ ಕೆಲವು ಪ್ರಮುಖ ವ್ಯಕ್ತಿಗಳಲ್ಲಿ ಕ್ರಿಕೆಟ್ ಆಟಗಾರ ಎಂ ಎಸ್ ಧೋನಿ, ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಮಂತ್ರಿ ಶ್ರೀ ಸಚಿನ್ ಪೈಲಟ್, ಮಾಜಿ ಕೇಂದ್ರ ಸಚಿವ ಅನುರಾಗ ಥಾಕುರ್ ಸೇರಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಭವ್ಯ ನರಸಿಂಹಬಮೂರ್ತಿ, ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಹಾಗೂ 2022 ಸಾಲಿನ ಪರೀಕ್ಷೆಯಲ್ಲಿ ಆಯ್ಕೆಯಾದ ಏಕೈಕ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿದ್ದೀನೆ ಎಂದು ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಇನ್ನು ಮುಂದೆ ನಾನು ದೇಶದ ಒಳಗೆ ರಾಜಕಾರಣಿಯಾಗಿ ನನ್ನ ಜನರ ಸೇವೆ ಮಾಡುವುದರ ಜೊತೆಗೆ ಭಾರತೀಯ ಸೇನಾಧಿಕಾರಿಯಾಗಿ ನನ್ನ ದೇಶ ಕರೆದಾಗ ಗಡಿಯಲ್ಲಿ ದೇಶದ ರಕ್ಷಣೆ ಮಾಡಲೂ ಸಿದ್ಧಳಿದ್ದೇನೆ ಎಂದಿದ್ದಾರೆ.

 

Ad
Ad
Nk Channel Final 21 09 2023
Ad