ಬೆಂಗಳೂರು: ‘ಬಿಗ್ ಬಾಸ್’ ಆಯೋಜಕರಿಗೆ ಕುಂಬಳಗೋಡು ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಬರುವಂತೆ ‘ಬಿಗ್ ಬಾಸ್’ ಆಯೋಜಕರಿಗೆ ನೋಟಿಸ್ ನೀಡಲಾಗಿದೆ. ಸ್ವರ್ಗ, ನರಕ ವಿಚಾರವಾಗಿ ಮಹಿಳೆಯರ ಕುರಿತಾದ ಹೇಳಿಕೆಯ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗದಿಂದ ದೂರು ದಾಖಲಿಸಿದ್ದು, ಮಹಿಳಾ ಆಯೋಗದ ದೂರು ಆಧರಿಸಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
‘ಬಿಗ್ ಬಾಸ್’ ಸೆಟ್ ಗೆ ತೆರಳಿ ಇನ್ ಸ್ಪೆಕ್ಟರ್ ಮಂಜುನಾಥ್ ಹೂಗಾರ ಅವರು ನೋಟಿಸ್ ನೀಡಿದ್ದಾರೆ. ಸ್ವರ್ಗ ನರಕ ವಿಚಾರವಾಗಿ ನಡೆದ ಸಂಭಾಷಣೆಯ ರಾ ಫುಟೇಜ್ ನೀಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಒಂದು ವೇಳೆ ಅಸಡ್ಡೆ ತೋರಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
Ad